ಶಿವಮೊಗ್ಗ | ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಅತ್ಯಾಚಾರಕ್ಕೆ ಯತ್ನ : ಪ್ರಕರಣ ದಾಖಲು

Date:

Advertisements

ಶಿವಮೊಗ್ಗ, ತಾಯಿ ಮತ್ತು ಸಹೋದರನನ್ನು ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶರಾವತಿ ನಗರದ ಎ ಬ್ಲಾಕ್‌ನಲ್ಲಿ ಸೆ.8ರ ಬೆಳಗಿನ ಜಾವ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.

ಯುವತಿ ತನ್ನ ತಾಯಿ ಮತ್ತು ಸಹೋದರನನ್ನು ಬೆಳಗಿನ ಜಾವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಿಟ್ಟು ಮರಳುತ್ತಿದ್ದರು. ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರು ನಿಂತಿದ್ದರು. ಅವರನ್ನು ಗಮನಿಸಿದ್ದ ಯುವತಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯತ್ತ ತೆರಳುತ್ತಿದ್ದರು.

ಆ ಪೈಕಿ ಒಬ್ಬ ಯುವಕ ಯುವತಿಯ ದ್ವಿಚಕ್ರ ವಾಹನವನ್ನು ಹಿಂಬಾಲಿಸಿದ್ದನು.ಸರ್ಕಿಟ್ ಹೌಸ್ ಸಮೀಪ ಯುವತಿಯ ದ್ವಿಚಕ್ರ ವಾಹನಕ್ಕೆ ಆ ಯುವಕ ತನ್ನ ಬೈಕ್ ಅಡ್ಡಿಗಟ್ಟಿ ಬೀಳಿಸಿದ್ದನು. ಯುವತಿಯ ವೇಲ್ ಮತ್ತು ಟೀ ಶರ್ಟ್ ಹಿಡಿದು ಎಳೆದಾಡಿದಾಗ. ಟೀ ಶರ್ಟ್ ಹರಿದಿದ್ದು, ಆಕೆ ತಪ್ಪಿಸಿಕೊಂಡು ಓಡಿದ್ದಾರೆ.

ಅದೇ ಮಾರ್ಗದಲ್ಲಿ ವಾಹನ ಬಂದಿದ್ದರಿಂದ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ ಯುವತಿ ಕೂಡಲೆ ತನ್ನ ದ್ವಿಚಕ್ರ ವಾಹನ ತೆಗೆದುಕೊಂಡು ಮನೆಗೆ ಹೋಗಿದ್ದು, ಸಹೋದರನಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X