ಶಿವಮೊಗ್ಗ, ರಾಜ್ಯ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಸೆ. 12 ರಂದು ಮ.1.30ಕ್ಕೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದು ಅಂದು ಲಕ್ಕವಳ್ಳಿಯಲ್ಲಿ ತುಂಬಿದ ಭದ್ರೆಗೆ ಬಾಗಿನ ಅರ್ಪಿಸಲಿದ್ದಾರೆ.
ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮ.3.30ಕ್ಕೆ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.