ಚಿತ್ರದುರ್ಗ | ಕಾಡು, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ನಮ್ಮ ರಕ್ಷಕರು: ನ್ಯಾ.ರೋಣ ವಾಸುದೇವ

Date:

Advertisements

“ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ ಮಾಡುವುದು ನಮ್ಮ ಕರ್ತವ್ಯ” ಎಂದು ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಸ್ಮರಿಸಿದರು.‌

ಚಿತ್ರದುರ್ಗ ನಗರದ ಅರಣ್ಯ ಇಲಾಖೆಯ ವಿಭಾಗೀಯ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಅರಣ್ಯ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು “ಹೆಚ್ಚಿನ ಸೌಲಭ್ಯ ಹಾಗೂ ಮೂಲ ಸೌಕರ್ಯಗಳನ್ನು ಸರ್ಕಾರವು ಅರಣ್ಯ ಇಲಾಖೆಗೆ ಕಲ್ಪಿಸಿಕೊಡಬೇಕು. ಅರಣ್ಯ ಸಂರಕ್ಷಣೆಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಮಾಡುವ ಇದು ಮಹತ್ವದ ಕಾರ್ಯ. ಪರಿಸರ, ವನ್ಯಜೀವಿ, ಜೀವವೈವಿಧ್ಯವನ್ನು ರಕ್ಷಣೆ ಮಾಡುವ ಅವಕಾಶ ಸಂವಿಧಾನದಲ್ಲಿದ್ದು, ನಾವು ಅದನ್ನು ರೂಢಿಸಿಕೊಳ್ಳಬೇಕು. ಪರಿಸರ ಹಾನಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಾಲತೇಶ್ ಅರಸ್ ಮಾತನಾಡಿ, “ವಿದ್ಯಾರ್ಥಿಗಳಲ್ಲಿ, ಸಾರ್ವಜನಿಕರಲ್ಲಿ ಅರಣ್ಯ ಸಂರಕ್ಷಣೆಯ ಮಹತ್ವ ಸಾರಬೇಕು. ಪರಿಸರ, ವನ್ಯಜೀವಿ ಮತ್ತು ಪ್ರಕೃತಿಯ ಸಮತೋಲನಕ್ಕಾಗಿ ಅರಣ್ಯಗಳ ಅಗತ್ಯದ ಬಗ್ಗೆ ಅರಿವು ಮಾಡಿಸಬೇಕು. ಅರಣ್ಯ ಕಾಯ್ದೆಗಳ ಪಾಲನೆ ಮತ್ತು ಪರಿಸರ ಹಾನಿ ತಡೆಯುವ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

“ಕರಡಿ, ಚಿರತೆ ಸೇರಿದಂತೆ ವನ್ಯಜೀವಿಗಳು ಗ್ರಾಮದೊಳಗೆ ಬರಲು ನಾವೇ ಕಾರಣವಾಗಿದ್ದೇವೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಿದ್ದು, ಜಾಗೃತಿ ಜೊತೆಗೆ ಸಹಬಾಳ್ವೆ ಅಗತ್ಯವಾಗಿದೆ. ಇದರ ತಡೆಗೆ ಸರ್ಕಾರದ ಜೊತೆಗೆ ನಾಗರೀಕರ ಜವಾಬ್ದಾರಿ ಕೂಡ ಇದೆ. ಈ ನಿಟ್ಟಿನಲ್ಲಿ ವನ್ಯಜೀವಿ ಉಪಟಳದ ಗ್ರಾಮಗಳ ಇಲಾಖೆ, ಅಧಿಕಾರಿಗಳು ಜನರೊಂದಿಗೆ ಸಂವಾದ, ಚರ್ಚೆ ಮಾಡಬೇಕು” ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ಗೋಪ್ಯಾನಾಯ್ಕ ಮಾತನಾಡಿ, “ದೇಶದಾದ್ಯಂತ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ಆಚರಿಸಲಾಗುತ್ತಿದೆ. 1966 ರಿಂದ 2025 ರವರೆಗೆ ರಾಜ್ಯದಲ್ಲಿ ಒಟ್ಟು 62 ಮಂದಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾಗಿದ್ದಾರೆ” ಎಂದರು.

“ದೇಶದ ಎಲ್ಲಾ ಹುತಾತ್ಮರ ಸ್ಮರಣೆ ನಮ್ಮದಾಗಿದೆ, ಜಿಲ್ಲೆಯ  ಅರಣ್ಯ ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಮತ್ತು ಅರಣ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಇಬ್ಬರು ಯೋಧರಿಗೆ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

ಅರಣ್ಯ ಇಲಾಖೆಯ ಹುತಾತ್ಮರ ಸ್ಮರಣಾರ್ಥ ಇದೇ ಸಂದರ್ಭದಲ್ಲಿ ಪರೇಡ್ ನಡೆಸಲಾಯಿತು. ಮುಖ್ಯ ಅತಿಥಿಗಳು ಅರಣ್ಯ ಹುತಾತ್ಮರಿಗೆ ಹೂಗುಚ್ಚ ಸಮರ್ಪಿಸಿ ಗೌರವ ಸಲ್ಲಿಸಿದರು. ಅರಣ್ಯ ಹುತಾತ್ಮರ ದಿನಾಚರಣೆಯ ಪಕ್ಷಿನೋಟ ಮತ್ತು ಅರಣ್ಯ ಹುತಾತ್ಮರ ಹೆಸರುಗಳನ್ನು ಸ್ಮರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ಸಿಬ್ಬಂದಿ, ಜೋಗಿಮಟ್ಟಿ ಪಾಲಕರು ಗಸ್ತು ವಿಭಾಗದವರು ಹಾಗೂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X