ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.
ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಗುಜರಾತ್ನ ರಾಜ್ಯಪಾಲ ದೇವವ್ರತ್ ಆಚಾರ್ಯ ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಮಧ್ಯಾಹ್ನ 12 ಗಂಟೆಗೆ ರಾಜ್ಯಸಭೆಯ ಸಭಾ ನಾಯಕರನ್ನು ರಾಧಾಕೃಷ್ಣನ್ ಭೇಟಿಯಾಗಲಿದ್ದಾರೆ. ನಂತರ ನಡೆಯಲಿರುವ ಸಭೆಗೆ ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಿದ್ದಾರೆ.