ನವೋದ್ಯಮಗಳಿಗೆ ₹100 ಕೋಟಿ ಆರ್ಥಿಕ ನೆರವು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

Advertisements
- ಮೊದಲ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟನೆ

- 23 ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಪ್ರಶಸ್ತಿ

ಹಸಿರು ಹೈಡ್ರೋಜನ್‌ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ ₹100 ಕೋಟಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನವೋದ್ಯಮಗಳ ಪ್ರತಿ ಯೋಜನೆಗೆ ಗರಿಷ್ಠ ₹5 ಕೋಟಿ ನೆರವು ನೀಡುವುದಾಗಿ ಘೋಷಿಸಿದರು.

“ಹಸಿರು ಹೈಡ್ರೋಜನ್‌ ನಾವೀನ್ಯತೆಯಲ್ಲಿ ನವೋದ್ಯಮಗಳನ್ನು ಬೆಂಬಲಿಸಲು ₹100 ಕೋಟಿ ಆರ್ಥಿಕ ನೆರವಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ನವೀನ ಜಲಜನಕ ಉತ್ಪಾದನೆ, ಸಂಗ್ರಹಣೆ, ಸಾರಿಗೆ ಮತ್ತು ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆಯ ಪ್ರತಿ ಯೋಜನೆಗೆ ₹5 ಕೋಟಿ ವರೆಗೆ ಒದಗಿಸುತ್ತದೆ. ಎಲೆಕ್ಟ್ರೋಲೈಜರ್ ಉತ್ಪಾದನೆಯಿಂದ ಹಿಡಿದು AI-ಚಾಲಿತ 25 ನವೋದ್ಯಮಗಳು ನಾವೀನ್ಯತೆ ಪ್ರದರ್ಶಿಸುತ್ತಿವೆ” ಎಂದರು.

ಹಸಿರು ಅಮೋನಿಯಾ ₹49.75 ಕಡಿಮೆ ಬೆಲೆ: “ರಸಗೊಬ್ಬರಗಳಲ್ಲಿ ಭಾರತ ಮೊದಲ ಹಸಿರು ಅಮೋನಿಯಾ ಹರಾಜು ನಡೆಸಿದ್ದು, 2024ರಲ್ಲಿ ಪ್ರತಿ ಕೆಜಿಗೆ ₹100.28ಕ್ಕೆ ಇದ್ದರೆ, ಇದೀಗ ಪ್ರತಿ ಕೆಜಿಗೆ ಅದರ ಅರ್ಧದಷ್ಟು ಅಂದರೆ ಕೇವಲ ₹49.75 ಐತಿಹಾಸಿಕ ಕಡಿಮೆ ಬೆಲೆ ದಾಖಲಾಗಿದೆ. ಒಡಿಶಾದ ಪ್ಯಾರದೀಪ್ ಫಾಸ್ಫೇಟ್‌ಗಳಲ್ಲಿ ಸರಬರಾಜು ಪ್ರಾರಂಭವಾಗಲಿದೆ. ಜುಲೈ 14ರಂದು ಆರಂಭಿಸಿದ 2ನೇ ಸುತ್ತಿನ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಸ್ತಾವನೆಗಳು ಸೆ.15ರವರೆಗೆ ತೆರೆದಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಇಯು-ಭಾರತ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗ ನೀಡಲಿದೆ. ತ್ಯಾಜ್ಯದಿಂದ ಹೈಡ್ರೋಜನ್ ಉತ್ಪಾದನೆಗೆ 30ಕ್ಕೂ ಹೆಚ್ಚು ಜಂಟಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.

ವಾರ್ಷಿಕ 5 ಮಿ.ಮೆ. ಟನ್‌ ಹಸಿರು ಹೈಡ್ರೋಜನ್‌: “ಭಾರತ 2030ರ ವೇಳೆಗೆ ವಾರ್ಷಿಕವಾಗಿ 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, 125 GW ಹೊಸ ನವೀಕರಿಸಬಹುದಾದ ಸಾಮರ್ಥ್ಯ ಮತ್ತು ₹8 ಲಕ್ಷ ಕೋಟಿ ಹೂಡಿಕೆಗೆ ಒತ್ತು ನೀಡಲಾಗಿದೆ. ಇದರಿಂದ 6 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಪ್ರತಿ ವರ್ಷ 50 ಮಿಲಿಯನ್ ಟನ್ CO₂ ಕಡಿತವಾಗಲಿದೆ. ಮೊದಲ ಸುತ್ತಲ್ಲೇ 23 ಯೋಜನೆಗಳು: ಕೇಂದ್ರ ಸರ್ಕಾರ 2023ರಲ್ಲಿ ₹19,744 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ (NGHM) ಪ್ರಾರಂಭಿಸಿದ ಮೇಲೆ ಭಾರತ ಹಸಿರು ಹೈಡ್ರೋಜನ್‌ಗಾಗಿ ಜಾಗತಿಕ ಕೇಂದ್ರವಾಗಿ ಗುರುತಿಸಿಕೊಳ್ಳುತ್ತಿದೆ. ಹಸಿರು ಅಮೋನಿಯಾ ಸಂಶೋಧನೆ ಮತ್ತು ಅಭಿವೃದ್ಧಿ ಕುರಿತಂತೆ ಮೊದಲ ಸುತ್ತಿನಲ್ಲೇ 23 ಯೋಜನೆಗಳನ್ನು ನೀಡಿದ್ದು, ಐಐಟಿ, ಐಐಎಸ್ಇಆರ್‌, ಸಿಎಸ್ಐಆರ್ ಪ್ರಯೋಗಾಲಯ ಮತ್ತು ಕೈಗಾರಿಕಾ ಪಾಲುದಾರರು ಈ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ” ಎಂದರು.

“ಭಾರತದ ಮೊದಲ ಬಂದರು ಆಧಾರಿತ ಹಸಿರು ಹೈಡ್ರೋಜನ್ ಪೈಲಟ್ ಯೋಜನೆಯನ್ನು ತಮಿಳುನಾಡಿನ ವಿ.ಒ.ಚಿದಂಬರನಾರ್ ಬಂದರಿನಲ್ಲಿ ಪ್ರಾರಂಭಿಸಲಾಗಿದೆ. ಉಕ್ಕಿನ ವಲಯದಲ್ಲಿ ಐದು ಪೈಲಟ್ ಯೋಜನೆಗಳು ಹೈಡ್ರೋಜನ್ ಆಧಾರಿತ ಡಿಕಾರ್ಬೊನೈಸೇಶನ್ ಪ್ರದರ್ಶಿಸುತ್ತಿವೆ. ಇಂಧನ ಭರ್ತಿ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಹೈಡ್ರೋಜನ್ ಬಸ್‌ ಮತ್ತು ಇಂಧನ ತುಂಬುವ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ” ಎಂದು ಹೇಳಿದರು.

ಲಕ್ಷಾಂತರ ಉದ್ಯೋಗ ಸೃಷ್ಟಿ: “ಭಾರತದ ರಫ್ತು ಬಲಪಡಿಸಲು ಕಾಂಡ್ಲಾ, ಪ್ಯಾರದೀಪ್ ಮತ್ತು ಟುಟಿಕೋರಿನ್ ಬಂದರುಗಳಲ್ಲಿ ಹೈಡ್ರೋಜನ್ ಹಬ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಎನ್‌ಟಿಪಿಸಿ, ರಿಲಯನ್ಸ್ ಮತ್ತು ಐಒಸಿಎಲ್‌ನಂತಹ ದೊಡ್ಡ ಉದ್ಯಮಗಳು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್‌ಎಂಇಗಳು ಹೈಡ್ರೋಜನ್‌ನಲ್ಲಿ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿವೆ. ಲಕ್ಷಾಂತರ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ” ಎಂದರು.

MNRE ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಮಾತನಾಡಿ, “ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮ ₹400 ಕೋಟಿ ಬಜೆಟ್ ವೆಚ್ಚ ಹೊಂದಿದ್ದು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಚಾಲನೆ ಬೆಂಬಲಿಸಲು MNRE ಸಿದ್ಧವಾಗಿದೆ” ಎಂದು ಹೇಳಿದರು.

ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ ನಿರ್ದೇಶಕ ಡಾ.ಅಭಯ್ ಭಾಕ್ರೆ, ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ. ಅಜಯ್ ಕುಮಾರ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X