ಉಡುಪಿ | ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಬಂಧನಕ್ಕೆ ಅಗ್ರಹ

Date:

Advertisements

ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಬಂಧನ ವಿಳಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2 ದಿನದಲ್ಲಿ ಬಂದಿಸದಿದ್ದಲ್ಲಿ ಠಾಣೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳದ ಧರ್ಮ ಸಂರಕ್ಷಣಾ‌ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡುವ ಕುರಿತು ರಟ್ಟಾಡಿ ಶ್ರೀರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ನವೀನಚಂದ್ರ ಶೆಟ್ಟಿ ರಟ್ಟಾಡಿ ಅವರಿಗೆ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ 29ರ ಹರೆಯದ ರಟ್ಟಾಡಿ ಗ್ರಾಮದ ಮಹಿಳೆ ಸೆ.2ರಂದು ಕರೆ ಮಾಡಿದ್ದರು.

ಈ ವೇಳೆ ನವೀನ್‌ಚಂದ್ರ ಶೆಟ್ಟಿ ತಾನು ಮನೆಯಲ್ಲಿರುವುದಾಗಿ ಹೇಳಿದ್ದು, ಮಧ್ಯಾಹ್ನ 1ಗಂಟೆಯೊಳಗೆ ಮನೆಗೆ ಬರುವಂತೆ ತಿಳಿಸಿದರು. ಅದರಂತೆ ಮಹಿಳೆ ಮಧ್ಯಾಹ್ನ 12ಗಂಟೆಯ ಸುಮಾರಿಗೆ ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿರುವ ನವೀನ್‌ಚಂದ್ರ ಶೆಟ್ಟಿಯ ಮನೆಗೆ ಹೋಗಿದ್ದು, ಅಲ್ಲಿ ನವೀನ್ ಚಂದ್ರ ಶೆಟ್ಟಿ ಜಗುಲಿಯ ಕುರ್ಚಿಯಲ್ಲಿ ಕುಳಿತ್ತಿದ್ದರು. ಈ ವೇಳೆ ಮಹಿಳೆ ಆಮಂತ್ರಣ ಪತ್ರಿಕೆಯನ್ನು ನವೀನ್‌ಚಂದ್ರ ಶೆಟ್ಟಿಯ ಕೈಗೆ ಕೊಟ್ಟಾಗ ಆತ ಮಹಿಳೆಯ ಕೈಯನ್ನು ಸ್ವರ್ಶಿಸಿ ಆಹ್ವಾನ ಪತ್ರಿಕೆ ತೆಗೆದುಕೊಂಡನು. ಇದರಿಂದ ಮಹಿಳೆಗೆ ಮುಜುಗರ ಉಂಟಾಗಿತ್ತೆಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಮಹಿಳೆ ಹೊರಡಲು ಸಿದ್ಧರಾದಾಗ ನವೀನ್‌ಚಂದ್ರ ಶೆಟ್ಟಿ ಎರಡು ನಿಮಿಷ ನಿಲ್ಲುವಂತೆ ಒತ್ತಾಯಿಸಿ, ಮಹಿಳೆ ಕುಳಿತ ಸೋಪಾದ ಪಕ್ಕದಲ್ಲಿ ಬಂದು ಕುಳಿತು, ಮಹಿಳೆಯನ್ನು ಹತ್ತಿರಕ್ಕೆ ಎಳೆದುಕೊಂಡು ಕೆನ್ನೆಗೆ ಮುತ್ತು ಕೊಟ್ಟಿರುವುದಾಗಿ ದೂರಲಾಗಿದೆ. ಇದರಿಂದ ಗಾಬರಿಗೊಂಡ ಮಹಿಳೆ ಅಲ್ಲಿಂದ ತಕ್ಷಣ ಎದ್ದು ಹೊರ ಬರುತ್ತಿರುವಾಗ, ನವೀನ್‌ಚಂದ್ರ ಶೆಟ್ಟಿ, ವಾಪಾಸು ಮನೆಗೆ ಬರುವಂತೆ ಹೇಳುತ್ತಾ ಹಿಂಬಾಲಿಸಿಕೊಂಡು ಬಂದಿರುವುದಾಗಿ ದೂರಲಾಗಿದೆ.

ಸೆ.11ರಂದು ಗುರುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಠಾಣೆಗೆ ತೆರಳಿ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಎರಡು ದಿನದಲ್ಲಿ ಠಾಣೆ ಎದುರಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗೋಪಾಲ, ಜಗನ್ನಾಥ, ರಾಘವೇಂದ್ರ, ಹರೀಶ್, ಕಿಶೋರ್, ಆದಿತ್ಯ, ರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X