ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ರಾಜ್ಯಾದ್ಯಂತ ನಡೆಯುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸದಂತೆ ಮನವಿ ಪತ್ರ ಸಲ್ಲಿಸಿದರು.
ವಿಭಜನೆಗಳಿಂದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸರ್ಕಾರದ ಸವಲತ್ತು ತಲುಪುವಲ್ಲಿ ತೊಂದರೆ ಉಂಟಾಗುತ್ತದೆ. ಜೊತೆಗೆ ಸಮಾಜದಲ್ಲಿ ಅನಾಗತ್ಯ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮುದಾಯವನ್ನು ವಿವಿಧ ಕ್ರಮಾಂಕಗಳಲ್ಲಿ ಬೇರ್ಪಡಿಸುವ ಬದಲು ‘ಬ್ರಾಹ್ಮಣ’ ಎಂಬ ಏಕೀಕೃತ ಗುರುತನ್ನು( ಕ್ರಮ ಸಂಖ್ಯೆ 210) ಮಾತ್ರ ನೀಡುವಂತೆ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ. ಟಿ. ಪ್ರಕಾಶ್ ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?ಸರಗೂರು | ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ
ಪಟ್ಟಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಬ್ರಾಹ್ಮಣ ಮುಸ್ಲಿಂ ಎಂಬೆಲ್ಲಾ ಹೆಸರುಗಳಿರುವುದು ಹೊಸ ಗೊಂದಲಕ್ಕೆ ಕಾರಣವಾಗಿವೆ. ಹೀಗಿರಲು ಸಾಧ್ಯವೇ ಇಲ್ಲ. ತಕ್ಷಣವೇ ಈ ಹೆಸರುಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.