ಉಡುಪಿ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ, ಸೆ 22 ರಿಂದ ಸಂಚಾರಕ್ಕೆ ಮುಕ್ತ ; ಸಂಸದ ಕೋಟ ಶ್ರೀನಿವಾಸ

Date:

Advertisements

ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸ್ತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದ್ರಾಳಿ ಮೇಲ್ಸ್ತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು ಸೆಪ್ಟೆಂಬರ್ 22 ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿದ್ದ

ಕೆಳ ಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಸೋಮವಾರದಿಂದಲೇ ಆರಂಭಗೊಳ್ಳಲಿದ್ದು, ಒಂದು ವಾರದ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಇಂದ್ರಾಳಿ ರೈಲ್ವೇ ಮೇಲ್ವೇತುವೆ ಕಾಮಗಾರಿ ನವರಾತ್ರಿಯ ಮೊದಲ ದಿನದಂದು ಲೋಕಾರ್ಪಣೆಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಕೆಳ ಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾದ ಹಿನ್ನೆಲೆಯಲ್ಲಿ ಸಂಸದರ ವಿಶೇಷ ಮುತುವರ್ಜಿಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿಶೇಷ ಅನುದಾನ ಒದಗಿಸಿದ್ದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಆರಂಭಗೊಳ್ಳಲಿದ್ದು, ಒಂದು ವಾರದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಮಳೆಯ ಕಾರಣದಿಂದ ಕೆಳ ಪರ್ಕಳ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸಿದ ಬಗ್ಗೆ ವಿಷಾದಪಡಿಸುತ್ತಾ ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಅಧೀಕ್ಷಕರಾದ ಸುಧಾಕರ ನಾಯ್ಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಅಶೋಕ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X