ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ವಿರುದ್ಧದ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ

Date:

Advertisements

2020-2021ರಲ್ಲಿ ದೆಹಲಿ ಗಡಿಯಲ್ಲಿ ನಡೆದ ದೀರ್ಘಕಾಲದ ರೈತ ಹೋರಾಟದ ಕುರಿತು ವಿವಾದಾತ್ಮಕ ಪೋಸ್ಟ್‌ ಹಾಕಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ದೆಹಲಿ ಗಡಿಯಲ್ಲಿ ನಡೆದ ರೈತ ಹೋರಾಟಗಳಲ್ಲಿ ಮಹಿಳೆಯರು ಪಾಲ್ಗೊಂಡಿದ್ದ ಬಗ್ಗೆ ಕಂಗನಾ 2021ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ, “ಈ ಅಜ್ಜಿ ಟೈಮ್ ನಿಯತಕಾಲಿಕದಲ್ಲಿ ಕಾಣಿಸಿದ್ದ ಅದೇ ಬಲಿಷ್ಠ ಭಾರತೀಯಳು. ಇವರು 100 ರೂ.ಗೆ ದೊರೆಯುತ್ತಾರೆ” ಎಂದು ಬರೆಯಲಾಗಿತ್ತು. ಈ ಪೋಸ್ಟ್‌ ಹಾಕಿದ್ದಕ್ಕಾಗಿ ಕಂಗನಾ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಾಗಿತ್ತು. ತಮ್ಮ ವಿರುದ್ಧದ ಪ್ರರಕಣವನ್ನು ರದ್ದುಗೊಳಿಸುವಂತೆ ಕೋರಿ ಕಂಗನಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಸಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ದ್ವಿಸದಸ್ಯ ಪೀಠವು, ಅವರ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಕರಣ ವಜಾಗೊಳಿಸಲು ನಿರಾಕರಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ (ಕಂಗನಾ) ವಾದವನ್ನು ಆಲಿಸಿದ ನ್ಯಾಯಮೂರ್ತಿ ಮೆಹ್ತಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿಮ್ಮ ಹೇಳಿಕೆಗಳ ವಿಚಾರವಾಗಿ ನೀವು ಏನು ಹೇಳುವಿರಿ? ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಕುರಿತು ನೀವು ಹಂಚಿಕೊಂಡಿದ್ದ ಪೋಸ್ಟ್‌, ಕೇವಲ ರೀ-ಟ್ವೀಟ್ ಮಾತ್ರವಲ್ಲ. ಅದರಲ್ಲಿ ನಿಮ್ಮದೇ ಆದ ಹೇಳಿಕೆಗಳನ್ನು ಕೂಡ ಸೇರಿಸಿದ್ದೀರಿ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಾದ ಮಂಡಿಸಿದ ಕಂಗನಾ ಪರ ವಕೀಲರು, “ಕಂಗನಾ ಅವರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ” ಎಂದು ಹೇಳಿದರು. ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮೆಹ್ತಾ, “ಅವರ ಸ್ಪಸ್ಟೀಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಒದಗಿಸಹುದು” ಎಂದು ಹೇಳಿದ್ದಾರೆ.

2021ರಲ್ಲಿ ನಡೆದಿದ್ದ ರೈತರ ಪ್ರತಿಭಟನೆಯ ಕುರಿತು ರೀಟ್ವೀಟ್ ಮಾಡಿದ್ದ ಕಂಗನಾ ರಣಾವತ್, ಎಂದು ಹಿರಿಯ ಪ್ರತಿಭಟನಾಕಾರರಾಗಿದ್ದ ಪ್ರತಿವಾದಿ ಮಹಿಂದರ್ ಕೌರ್ ವಿರುದ್ಧ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮಹಿಂದರ್ ಕೌರ್ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X