ಮೈಸೂರು | ನಿಝಾಮಿಯಾದಲ್ಲಿ ಪದವಿ, ಬಿಎಡ್ ಪ್ರಾರಂಭಕ್ಕೆ ಚಿಂತನೆ : ಶಾಸಕ ತನ್ವಿರ್ ಶೇಠ್

Date:

Advertisements

ಮೈಸೂರು ನಗರದ ಅಶೋಕಾ ರಸ್ತೆಯಲ್ಲಿರುವ ನಿಝಾಮಿಯಾ ಶಾಲಾ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಾಂಪೌಂಡ್ ಮತ್ತು ಸೈಕಲ್ ಸ್ಟ್ಯಾಂಡ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತನ್ವಿರ್ ಶೇಠ್ ಶತಮಾನೋತ್ಸವ ಪೂರೈಸಿರುವ ನಿಝಾಮಿಯಾ ಶಾಲೆಯಲ್ಲಿ ಪದವಿ ಮತ್ತು ಬಿಎಡ್ ಪ್ರಾರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರೆ ಶಾಲಾ ದಾಖಲಾತಿ ಹೆಚ್ಚಿಸಬಹುದು. ಇದರಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

ನರಸಿಂಹರಾಜ ಕ್ಷೇತ್ರದಲ್ಲಿ ಒಟ್ಟು 71 ಸರ್ಕಾರಿ ಶಾಲೆಗಳಿವೆ, ಈ ಪೈಕಿ 36 ಶಾಲೆಗಳ ದಾಖಲಾತಿ ಇಲ್ಲ, ಶಾಂತಿನಗರ ಮತ್ತು ಗೌಸಿಯಾನಗದಲ್ಲಿ ಈ ಸಮಸ್ಯೆ ಇದೆ. ದಾನಿಗಳು ಕೊಟ್ಟ ಜಾಗದಲ್ಲಿ ಶಾಲೆ ನಿರ್ಮಿಸಲಾಗಿದೆ. ಇಂತಹ ಶಾಲೆಗಳ ದಾಖಲಾತಿಗಳನ್ನು ಜಿಲ್ಲಾಡಳಿತ ಪರಿಶೀಲಿಸಿ ಸರಿಪಡಿಸಿಕೊಡಬೇಕು. ಇದರಿಂದ ಇವುಗಳು ಸರ್ಕಾರಿ ಆಸ್ತಿಗಳಾಗಿ ಉಳಿಯುತ್ತವೆ. ಅಲ್ಲದೇ, ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಕೆಲವು ಶಾಲೆಗಳಿಗೆ ಬಾಕಿ ಬಿಲ್ ಬರುತ್ತಿದೆ. ಜಿಲ್ಲಾಧಿಕಾರಿಗಳು ಅದನ್ನು ಸೆಸ್ಕ್ ಇಲಾಖೆಯ ಸಭೆಯಲ್ಲಿ ಮಾತನಾಡಿ ಸರಿಪಡಿಸಿಕೊಡಬೇಕು.

ಶಾಲೆಗಳಿಗೆ ಉಚಿತವಾಗಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಮತ್ತು ಸರ್ಕಾರಿ ಶಾಲೆಗಳ ಶೌಚಾಲಯಗಳ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಸಂಸ್ಥೆ ವಹಿಸಿಕೊಳ್ಳಬೇಕೆಂದು ಕೋರಿದರು. ಇಂತಹ ಮೂಲಭೂತ ಸೌಲಭ್ಯಗಳನ್ನು ನಾವುಗಳು ಒದಗಿಸಿದರೆ ಸರ್ಕಾರಿ ಶಾಲೆಗಳ ದಾಖಲಾತಿಯೂ ಹೆಚ್ಚುತ್ತದೆ. ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಿದಂತಾಗುತ್ತದೆ ಎಂದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಮಾತನಾಡಿ, ‘ಎನ್‌ಆರ್ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಫಂಡ್ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಮೈಸೂರು ಮಹಾನಗರಪಾಲಿಕೆ ಆಯಕ್ತ ಷೇಕ್ ತನ್ವೀರ್ ಆಸೀಫ್ ಮಾತನಾಡಿ ‘ಶಾಲೆಗಳ ಶೌಚಾಲಯದ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಳ್ಳುವುದಾಗಿ’ ಹೇಳಿದರು. ಡಿಡಿಪಿಐ ಜವರೇಗೌಡ ಮಾತನಾಡಿ, ‘ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಲು ಸರ್ವ ಪ್ರಯತ್ನ ಮಾಡಲಾಗುವುದು’ ಎಂದರು

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=A4kqUxXWMIw

ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ “ನಿಝಾಮಿಯಾ ಶಾಲೆಗೆ ನಾನು ನಾಲ್ಕು ಬಾರಿ ಭೇಟಿ ನೀಡಿದ್ದೇನೆ. ಪ್ರತಿಯೊಂದು ಭೇಟಿ ಸಂದರ್ಭದಲ್ಲೂ ಶಾಲೆಯ ಸೊಬಗು ಹೆಚ್ಚುತ್ತಿದೆ, ಶಾಸಕರಾದ ತನ್ವೀರ್ ಸೇಠ್ ಅವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳಿಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತದೆ” ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಂಡ್ಯ | ‘ಸ್ವರಾಜ್ ಉತ್ಸವ’ : ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ

ಕಾರ್ಯಕ್ರಮದಲ್ಲಿ ಡಿಡಿಪಿಯು ನಾಗಮ್ಮ, ಕೆಆರ್‌ಐಡಿಎಲ್ ಇಂಜಿನಿಯರ್ ಶೋಭಾ, ಶಿಲ್ಪ, ಬಿಇಓ ರೇವಣ್ಣ, ಶಿಕ್ಷಣ ತಜ್ಞ ನಬೀಜಾನ್, ಸ್ಥಳೀಯ ಮುಖಂಡರಾದ ಖಲೀಲ್ ಉರ್ ರಹಮಾನ್, ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್, ನಸೀರುದ್ದೀನ್ ಬಾಬು, ನಿವೃತ್ತ ಡಿಡಿಪಿಐ ರುಕ್ಸಾನಾ ನಾಝನೀನ್, ಕಾಂಗ್ರೆಸ್ ಲೇಬರ್‌ಸೆಲ್ ವಿಭಾಗದ ಅಧ್ಯಕ್ಷ ಮೊಹಮ್ಮದ್ ಶಿಫ್ಟನ್, ಅಫ್ರೋಜ್ ಖಾನ್, ಸೈಯದ್ ಫಾರೂಖ್, ಇಲ್ಯಾಸ್ ಅಹಮದ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X