ಉಡುಪಿ | ಮದುವೆಗೆ ನಿರಾಕರಣೆ: ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಸಾವು

Date:

Advertisements

ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಚೂರಿ ಇರಿತಕ್ಕೆ ಒಳಗಾದ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ರಕ್ಷಿತಾ (24) ಇರಿತಕ್ಕೆ ಒಳಗಾಗಿ ಮೃತಪಟ್ಟ ಯುವತಿ.
ಆರೋಪಿ ಕಾರ್ತಿಕ್ ಪೂಜಾರಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.

ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಕುಸಿದು ಬಿದ್ದಿದ್ದಳು .ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನು ಮಣಿಪಾಲ ಕಸ್ತೂರ್ ಬಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇದೀಗ ಮೃತಪಟ್ಟ ಬಗ್ಗೆ ಮಾಹಿತಿ ವರದಿಯಾಗಿದೆ.

ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಮತ್ತು ಆಕೆಯ ಮನೆಯವರು ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ ನಡೆಯುತ್ತಿತ್ತು. ಇಂದು ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆನ್ನತ್ತಿ ಬಂದ ಯುವಕ, ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯತ್ನಿಸಿದ್ದಾನೆ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1007180801
ಆರೋಪಿ ಕಾರ್ತಿಕ್ ಪೂಜಾರಿ ಕೂಡ ಹತ್ತಿರದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಬಗ್ಗೆ ಮಾಹಿತಿ ಲಭಿಸಿದೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X