ಮೋದಿ ಮಣಿಪುರ ಭೇಟಿಗಿಂತ ವೋಟ್ ಚೋರಿ ಮುಖ್ಯ ಸಮಸ್ಯೆ: ರಾಹುಲ್ ಗಾಂಧಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುವುದು ದೊಡ್ಡ ವಿಚಾರವಲ್ಲ, ಸದ್ಯ ಮತಗಳ್ಳತನವೇ ಮುಖ್ಯ ಸಮಸ್ಯೆ’ ಎಂದು ಶುಕ್ರವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

“ಮಣಿಪುರದಲ್ಲಿ ಸಮಸ್ಯೆ ಬಹಳ ದಿನಗಳಿಂದ ನಡೆಯುತ್ತಿದೆ. ಅವರು ಈಗ ಅಲ್ಲಿಗೆ ಹೋಗುತ್ತಿರುವುದು ಒಳ್ಳೆಯದು. ಆದರೆ ದೇಶದ ಪ್ರಮುಖ ಸಮಸ್ಯೆ ‘ಮತ ಗಳ್ಳತನ’ ಎಂದರು.

ಗುಜರಾತ್‌ನ ಜೂನಾಗಢದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳನ್ನು ‘ಚೋರಿ ಮಾಡಲಾಗಿದೆ’ ಎಂದು ಸಾಬೀತುಪಡಿಸಿದ್ದೇನೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಜನರು ಎಲ್ಲೆಡೆ ‘ವೋಟ್ ಚೋರ್’ ಎಂದು ಕೂಗುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು. ಈ ಹೇಳಿಕೆಯನ್ನು ನೀಡುವ ಮುನ್ನ, ಅವರು ಜೂನಾಗಢದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮತ್ತು ನಗರ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ‘ಸಂಘಟನಾ ಸೃಜನ್ ಅಭಿಯಾನ್’ ಕಾರ್ಯಕ್ರಮದ ಅಂಶಗಳನ್ನು ಚರ್ಚಿಸಿದ್ದರು.

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಇದರಿಂದ 200ಕ್ಕೂ ಹೆಚ್ಚು ಜನರು ಮೃತಪಟ್ಟು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X