ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಹುಲಸೂರ ತಾಲ್ಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಹಲಸಿ ತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತರು. ಸುಮಾರು 30 ಅಡಿ ಎತ್ತರದ ಸೇತುವೆ ಮೇಲಿಂದ ಮಾಂಜ್ರಾ ನದಿಗೆ ಹಾರಿದ ಭಯಾನಕ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
ವಿಷಯ ತಿಳಿದು ಮೇಹಕರ್ ಠಾಣೆಯ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿ ಮೃತದೇಹ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಬೀದರ್ | ಬೆಳೆ ಹಾನಿ : ರೈತರಿಗೆ ಶೀಘ್ರ ಪರಿಹಾರ ವಿತರಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ
ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ