ಕಾವೇರಿ ನೀರು ಸರಬರಾಜು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.
ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಮಾಹಿತಿ ನೀಡಿದ್ದು, “ಸೋಮವಾರದಿಂದ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ. ಜನರು ಮುಂಚಿತವಾಗಿಯೇ ನೀರು ಸಂಗ್ರಹಿಸಿ ಇಟ್ಟುಕೊಳ್ಳಬೇಕು” ಎಂದು ತಿಳಿಸಿದ್ದಾರೆ.
“ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಾಮಗಾರಿ ನಡೆಯುವ ಹಿನ್ನೆಲೆ ಮೂರು ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ.