ಅಮೆರಿಕದಲ್ಲಿ ಕನ್ನಡಿಗನ ತಲೆ ಕತ್ತರಿಸಿ ಬರ್ಬರ ಹತ್ಯೆ

Date:

Advertisements

ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಹಲ್ಲೆಗೈದು, ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ, ಭಯಾನಕ ಘಟನೆ ಅಮೆರಿಕದ ಡಲ್ಲಾಸ್‌ನಲ್ಲಿ ನಡೆದಿದೆ.

ಕೊಲೆಯಾದವರನ್ನು ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನವರು ಎಂದು ತಿಳಿದುಬಂದಿದೆ. ನಾಗಮಲ್ಲಯ್ಯ ಡಲ್ಲಾಸ್‌ನ ಹೋಟೆಲ್‌ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರನ್ನು ಅವರ ಸಹೋದ್ಯೋಗಿ, ಕ್ಯೂಬಾ ಮೂಲದ ಯೊರ್ಡಾನಿಸ್ ಕೊಬೊಸ್ ಮಾರ್ಟಿನೆಝ್‌ ಎಂಬ ಹತ್ಯೆಗೈದಿದ್ದಾನೆ ಎಂದು ವರದಿಯಾಗಿದೆ.

ವಾಶಿಂಗ್‌ ಮಶಿನ್‌ಗೆ ಹಾನಿಯಾಗಿದ್ದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, ಮಾರ್ಟಿನೆಝ್ ಕತ್ತಿ ತೆಗೆದುಕೊಂಡು ನಾಗಮಲ್ಲಯ್ಯ ಅವರನ್ನು ಅಟ್ಟಾಡಿಸಿಕೊಂಡು ಹೋಗಿ, ತಲೆ ಕತ್ತರಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಗಮಲ್ಲಯ್ಯ ಅವರ ಹತ್ಯೆಯನ್ನು ಹೌಸ್ಟನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಖಂಡಿಸಿದೆ. “ಸಂತ್ರಸ್ತ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಅಗತ್ಯವಿರುವ ಎಲ್ಲ ರೀತಿಯ ನೆರವನ್ನು ನೀಡಲಿದ್ದೇವೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ” ಎಂದು ಕಚೇರಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ-ಭೂತಾನ್ ನಡುವೆ 2 ಗಡಿಯಾಚೆಗಿನ ರೈಲು ಯೋಜನೆ ಘೋಷಣೆ

ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ...

ಭಯೋತ್ಪಾದಕ ಸಂಘಟನೆ ಸಾಲಿಗೆ ಬಿಷ್ಣೋಯ್ ಗ್ಯಾಂಗ್: ಕೆನಡಾ ಸರ್ಕಾರ ಘೋಷಣೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು,...

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

ಅಮೆರಿಕಕ್ಕೆ ವಾಪಸಾಗುತ್ತಿರುವ ಭಾರತೀಯರ ವಿರುದ್ದ ‘Clog The Toilet’ ವರ್ಣಭೇದ ಅಭಿಯಾನ; ಏನಿದು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್‌-1ಬಿ(H-1B) ವೀಸಾಗಳಿಗೆ $100,000 ಶುಲ್ಕವನ್ನು ಘೋಷಿಸಿದ...

Download Eedina App Android / iOS

X