ಬೀದರ್‌ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ : ಗುರುಪ್ರಸಾದ್‌ ಖಂಡ್ರೆ

Date:

Advertisements

ಗುಣಮಟ್ಟದ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼನಾನಾ ಕಾರ್ಯಗಳ ಒತ್ತಡಗಳ ನಡುವೆ ಶಿಕ್ಷಕರು ಮಕ್ಕಳಿಗೆ ಉತ್ತಮ ಬೋಧನೆ ಮಾಡಬೇಕು. ಮಕ್ಕಳಿಗೆ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು. ಸದಾ ಮಕ್ಕಳ ಏಳಿಗೆ ಬಯಸುವ ಶಿಕ್ಷಕ ವೃತ್ತಿ ಎಲ್ಲರಿಗೂ ಸಿಗುವುದಿಲ್ಲʼ ಎಂದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಬಿಕೆ ಪಾಟೀಲ್‌ ಮಾತನಾಡಿ, ʼಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಎಲ್ಲ ವೃತ್ತಿಗಳಿಗೆ ತೆರಳುವವರು ಶಿಕ್ಷಕರಿಂದ ಕಲಿತ ವಿದ್ಯಾರ್ಥಿಗಳೇ ಆಗಿರುತ್ತಾರೆ. ಬಸವಾದಿ ಶರಣರು ತಿಳಿಸಿದ ಅರಿವೇ ಗುರು, ಕಾಯಕದ ಮಹತ್ವ ಮೈಗೂಡಿಸಿಕೊಳ್ಳಬೇಕಾಗಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆʼ ಎಂದು ತಿಳಿಸಿದರು.

WhatsApp Image 2025 09 13 at 10.31.26 AM
ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ʼವಿದ್ಯಾರ್ಥಿಗಳ ಕಲಿಕಾ ಉನ್ನತಿಗೆ ಶಿಕ್ಷಕರು ನಿರಂತರವಾಗಿ ಶ್ರಮಿಸುತ್ತಾರೆ. ಮಕ್ಕಳ ಯಶಸ್ವಿ ಬದುಕಿಗೆ ದಾರಿ ತೋರುವ ಶಿಕ್ಷಕರನ್ನು ವಿದ್ಯಾರ್ಥಿಗಳು ಯಾವತ್ತೂ ಮರೆಯದೆ ಗೌರವಿಸಬೇಕುʼ ಎಂದು ಸಲಹೆ ನೀಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಡೋಲೆ ಮಾತನಾಡಿ, ʼಈ ಭಾಗದಲ್ಲಿ ಸ್ಥಾಪನೆಯಾದ ಅಕ್ಕಮಹಾದೇವಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣ ಪ್ರಗತಿಗೆ ನಾಂದಿ ಹಾಡಿತು. ಮಹಿಳಾ ಸಬಲೀಕರಣ ಉದ್ದೇಶದಿಂದ ಮಾಜಿ ಸಚಿವ ಭೀಮಣ್ಣಾ ಖಂಡ್ರೆ ಹಾಗೂ ಡಾ.ಚನ್ನಬಸವ ಪಟ್ಟದ್ದೇವರು ನಿರ್ಮಿಸಿದ ಈ ಕಾಲೇಜು ಜಿಲ್ಲೆಗೆ ಮಾದರಿಯಾಗಿದೆʼ ಎಂದರು.

ವಿದ್ಯಾರ್ಥಿನಿಯರಾದ ಅಂಜಲಿ ಶಿವಕುಮಾರ್‌ ಹಾಗೂ ಗಂಗಾಶ್ರೀ ಅವರು ಶಿಕ್ಷಕರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೀದರ್‌ | ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿದ ವ್ಯಕ್ತಿ, ಮೃತದೇಹ ಪತ್ತೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಧೀರಜ್‌ ದೇಶಪಾಂಡೆ, ಮಲ್ಲಿಕಾರ್ಜುನ ಹೊನ್ನಾ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೇಯಾ ನಿರೂಪಿಸಿದರು. ಸುಶ್ಮಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X