ಹಾಸನ ಅಪಘಾತ ಮಾಸುವ ಮುನ್ನವೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತರು. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ
ದುರಂತದಲ್ಲಿ ಅದೃಷ್ಟವಶಾತ್ ಗರ್ಭಿಣಿ ಹಾಗೂ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಗರ್ಭಿಣಿ ಪತ್ನಿ ಮತ್ತು 3 ವರ್ಷದ ಮಗುವನ್ನು ವಿಜಯ್ ಎಂಬುವವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.
ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿ, ಬೆಳಿಗ್ಗೆ 7.45 ರ ಸಮಯದಲ್ಲಿ ಘಟನೆ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಿಂದ ಲಾರಿ ಬಂದಿದೆ. ಆಟೋ, ಕಾರಿಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದರು.