ಧರ್ಮಸ್ಥಳ ಪ್ರಕರಣ: ಸಾಕ್ಷಿದಾರ ಪ್ರದೀಪ್ ಹೇಳಿಕೆ ಕೋರ್ಟ್‌ನಲ್ಲಿ ದಾಖಲು

Date:

Advertisements

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣದ (39/2025) ಸಾಕ್ಷಿ ಪ್ರದೀಪ್ ಅವರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳಲಾಗಿದೆ. ಶುಕ್ರವಾರ ಕೋರ್ಟ್ಗೆ ಕರೆದೊಯ್ದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 183ರ ಅಡಿಯಲ್ಲಿ ಹೇಳಿಕೆ ಪಡೆಯಲಾಗಿದೆ.

ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೆಕ್ಯಾನಿಕಲ್ ಅಂಗಡಿ ನಡೆಸುತ್ತಿರುವ ಪ್ರದೀಪ್ ಅವರು ಬಂಟ್ವಾಳದ ನಿವಾಸಿ. ಸೌಜನ್ಯ ಅವರ ಮಾವ, ಹೋರಾಟಗಾರ ವಿಠಲ್ ಗೌಡ ಅವರ ಆಪ್ತ ಸಹಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಜೊತೆಗೆ ಜಸ್ಟೀಸ್ ಫಾರ್ ಸೌಜನ್ಯ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಅಸಹಜ ಸಾವುಗಳು ಮತ್ತು ತಲೆಬುರುಡೆಗೆ ಸಂಬಂಧಿಸಿದಂತೆ ಪ್ರದೀಪ್ ಅವರನ್ನು ಎಸ್ಐಟಿ ಹಲವು ದಿನಗಳಿಂದ ವಿಚಾರಣೆ ನಡೆಸಿತ್ತು. ಅವರ ಹೇಳಿಕೆಯನ್ನು ಈಗ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ.

“ಸೆಕ್ಷನ್ 183ರ ಅಡಿಯಲ್ಲಿ ಅವರ ಹೇಳಿಕೆಯನ್ನು ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದಾಖಲಿಸಿಕೊಳ್ಳಲಾಗಿದೆ. ಇದು ಗೌಪ್ಯ ಹೇಳಿಕೆಯಾಗಿರುವುದರಿಂದ ನಾವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ‘ಬಿಎಲ್ಆರ್ ಪೋಸ್ಟ್’ ವರದಿ ಮಾಡಿದೆ.

“ಪ್ರದೀಪ್ ಅವರನ್ನು ಪ್ರಕರಣದಲ್ಲಿ ದೂರುದಾರ ಸಾಕ್ಷಿಯಾಗಿ ಪರಿಗಣಿಸಲಾಗುವುದಿಲ್ಲ. ಹೇಳಿಕೆ ದಾಖಲಿಸಲು ಮಾತ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಹಂತದಲ್ಲಿ ಯಾವುದೇ ಬಂಧನವಿಲ್ಲ” ಎಂದು ಮೂಲಗಳು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ನ್ಯಾಯಾಧೀಶರ ಮುಂದೆ ಎರಡು ಗಂಟೆಗಳ ಕಾಲ ಹೇಳಿಕೆಯನ್ನು ದಾಖಲಿಸಲಾಗಿದೆ.

ಇದರ ನಡುವೆ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಧರ್ಮಸ್ಥಳದಲ್ಲಾದ ಅಸ್ವಾಭಾವಿಕ ಸಾವುಗಳು ಮತ್ತು ಅಂತ್ಯಕ್ರಿಯೆಗೆ ಸಂಬಂಧಿಸಿದ ಪಂಚಾಯಿತಿ ದಾಖಲೆಗಳನ್ನು ಎಸ್ಐಟಿ ಸಂಗ್ರಹಿಸುತ್ತಿದೆ ಎಂದು ವರದಿಯಾಗಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆಯಲ್ಲಿ ಈಗಾಗಲೇ ಮಹಜರು ಪೂರ್ಣಗೊಂಡಿದೆ. ಅಲ್ಲಿ ಹೆಚ್ಚಿನ ಸಂಖ್ಯೆಯ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿವೆ.

ಪ್ರಕರಣದ ಏಕೈಕ ಆರೋಪಿ ಚಿನ್ನಯ್ಯನನ್ನು ಆಗಸ್ಟ್ 23 ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಸುಳ್ಳು ಸಾಕ್ಷ್ಯ ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಿದ ತಲೆಬುರುಡೆಗೆ ಸಂಬಂಧಿಸಿದ ಸಾಕ್ಷ್ಯಗಳು ನಕಲಿ ಎಂಬ ಆರೋಪವನ್ನು ಚಿನ್ನಯ್ಯ ಎದುರಿಸುತ್ತಿದ್ದಾರೆ. ಚಿನ್ನಯ್ಯನ ದೂರನ್ನು ಆಧರಿಸಿ ಜುಲೈ 19 ರಂದು ಎಸ್ಐಟಿ ರಚಿಸಲಾಯಿತು. ನಂತರ ಅವರು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದರು. ಇದರ ನಂತರ, ಎಸ್ಐಟಿ ಎರಡು ವಾರಗಳ ಕಾಲ ಅಸ್ಥಿಪಂಜರವನ್ನು ಹೊರತೆಗೆಯುವ ಕಾರ್ಯಾಚರಣೆಯನ್ನು ನಡೆಸಿತು. ಆ ವೇಳೆ ಇಬ್ಬರು ವ್ಯಕ್ತಿಗಳ ಕಳೇಬರಗಳು ಸಿಕ್ಕಿವೆ ಎಂದು ವರದಿಯಾಗಿದೆ.

ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಒಳಪಡಿಸಲಾಯಿತು. ವಿಚಾರಣೆಯ ನಂತರ, ನ್ಯಾಯಾಧೀಶ ವಿಜಯೇಂದ್ರ ಟಿಎಚ್ ಅವರು ಆದೇಶವನ್ನು ಸೆಪ್ಟೆಂಬರ್ 16 ಕ್ಕೆ ಕಾಯ್ದಿರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X