ಕೊಪ್ಪಳ | ಹಾಸ್ಟೆಲ್ ವಿದ್ಯಾರ್ಥಿಗಳ ಹಲವು ಬೇಡಿಕೆ ಈಡೇರಿಕೆ ಆಗ್ರಹಿಸಿ ರಾಜ್ಯ ಮಟ್ಟದ ಸಮಾವೇಶ

Date:

Advertisements

ವಸತಿ ನಿಲಯಗಳ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ವಾರ್ಡನ್ ಹುದ್ದೆ, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಕನಿಷ್ಠ ಮೂಲ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾವೇರಿಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಗ್ಯಾನೇಶ್ ಕಡಗದ ಹೇಳಿದರು.

ಎಸ್ಎಫ್ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದ ಲೋಗೋವನ್ನು ಕೊಪ್ಪಳದ ಅಶೋಕ ವೃತ್ತದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, “ಅಕ್ಟೋಬರ್ 4-5ರಂದು ನಡೆಯುವ ಸಮಾವೇಶದಲ್ಲಿ ರಾಜ್ಯದಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳ ಜೊತೆಗೆ ಮೂಲಸೌಕರ್ಯಗಳ ಕುರಿತು ಚರ್ಚಿಸಲಾಗುವುದು. ಈಗಾಗಲೇ ರಾಜ್ಯದಲ್ಲಿರುವ 3.5ಲಕ್ಷ ಎಸ್ಸಿ ವಿದ್ಯಾರ್ಥಿಗಳ ಪೈಕಿ 2400 ವಸತಿ ನಿಲಯಗಳು, 1.5ಲಕ್ಷ ಎಸ್.ಟಿ ವಿದ್ಯಾರ್ಥಿಗಳ ಪೈಕಿ 1200 ವಸತಿ ನಿಲಯಗಳು, 2.5 ಒಬಿಸಿ ವಿದ್ಯಾರ್ಥಿಗಳ ಪೈಕಿ 2500 ನಿಲಯಗಳು ಸೇರಿ ಒಟ್ಟು 7.5 ವಿದ್ಯಾರ್ಥಿಗಳು ಮತ್ತು 6000ಕ್ಕೂ ಅಧಿಕ ನಿಲಯಗಳಿವೆ. ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೇಮಕಾತಿಗಳು ವಿಳಂಬದ ಕಾರಣದಿಂದಾಗಿ ನಿಲಯ ಪಾಲಕರ, ಸ್ವಚ್ಚತಾ ಸಿಬ್ಬಂದಿ ಕೊರತೆ ಹೆಚ್ಚಿದೆ. ಟೆಂಡರ್ ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಜೈಲಿನಲ್ಲಿರುವ ಕೈದಿಗಳಿಗಿಂತ ಕಡೆಯಾಗಿ ಕಾಣಲಾಗುತ್ತದೆ. ರಾಜ್ಯ ಸರ್ಕಾರಕ್ಕೆ ಸಮಾಜ ಕಲ್ಯಾಣ ಇಲಾಖೆ 14 ಕೋಟಿ ಹಣ ಕೇಳಿದೆ ಆದರೆ ಸರ್ಕಾರ ನೀಡುತ್ತಿಲ್ಲ. ಅದಕ್ಕಾಗಿ ಎಸ್ಎಫ್ಐ ತೀವ್ರ ವಿರೋಧ ವ್ಯಕ್ತಪಡಿಸಿದೆ” ಎಂದರು.

“ಮೆಟ್ರಿಕ್ ವಿದ್ಯಾರ್ಥಿಗಳಿಗೆ 1750 ರೂ ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ 1850 ರೂ ಆಹಾರ ಭತ್ಯೆಯನ್ನು ನೀಡಲಾಗುತ್ತಿದೆ. ಇದರಿಂದ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ 3500ರೂ ಆಹಾರ ಭತ್ಯಯನ್ನು ಹೆಚ್ಚಿಸಬೇಕು. ಇದರ ಭಾಗವಾಗಿ ಹಾವೇರಿಯಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಸಮಾವೇಶವನ್ನು ಮಾಡಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ” ಎಂದು ಹೇಳಿದರು.

ಎಸ್ಎಫ್ಐ ಮುಖಂಡ ಯಮನೂರ ಮಾತನಾಡಿ, “ವಿದ್ಯಾರ್ಥಿಗಳಿಗೆ ಸರಿಯಾದ ಭದ್ರತೆ ಇಲ್ಲ. ಆರೋಗ್ಯ ಪರೀಕ್ಷೆ ನಡೆಯುತ್ತಿಲ್ಲ, ಅಷ್ಟಲ್ಲದೆ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಪ್ರಶ್ನಿಸಿದರೆ ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ವಸತಿ ನಿಲಯವನ್ನು ಬಿಡುವಂತಾಗಿದೆ. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯವನ್ನು ಕಲ್ಪಿಸಬೇಕು, ಆದರೆ ಹಾವೇರಿ, ಧಾರವಾಡ ಹುಬ್ಬಳ್ಳಿ, ಬೆಂಗಳೂರಿನಂತಹ ನಗರಗಳಲ್ಲಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡಲಾಗುತ್ತದೆ. ಇದನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಪ್ರಾರಂಭದ ಹಂತದಲ್ಲಿರುವ 120 ಹಾಸ್ಟೆಲ್ ಗಳನ್ನು ಕೂಡಲೇ ತೆರೆಯಬೇಕು. ಈ ಶೈಕ್ಷಣಿಕ ಸಾಲಿನಲ್ಲಿ 10 ಹಾಸ್ಟೆಲ್‌ಗಳನ್ನು ಕೂಡಲೇ ತೆರೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

“ಉತ್ತಮ ಶಿಕ್ಷಣಕ್ಕಾಗಿ ಹಾಸ್ಟೆಲ್ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಎಸ್ಎಫ್ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದಲ್ಲಿ ಇಡೀ ರಾಜ್ಯದ 200ಕ್ಕೂ ಅಧಿಕ ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಂಡು ಹಾಸ್ಟೆಲ್ ವ್ಯವಸ್ಥೆಯ ಕುರಿತು ಸಮಗ್ರ ಚರ್ಚೆಗಳು, ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸರ್ಕಾರದ ಸಚಿವರು, ನಾಲ್ಕು ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಸಂಪನ್ಮೂಲ ವ್ಯಕ್ತಿಗಳು, ಉಪನ್ಯಾಸಕರು, ತಜ್ಞರು, ಅಖಿಲ ಭಾರತ ಅಧ್ಯಕ್ಷರು ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಾಸ್ಟೆಲ್‌ಗಳ ಮಧ್ಯೆ ವಿದ್ಯಾರ್ಥಿ ಚಳವಳಿ ದೊಡ್ಡ ಆಂದೋಲನ ಪ್ರಾರಂಭಿಸುತ್ತಿದೆ” ಎಂದರು.

ಈ ವೇಳೆ ಎಸ್ಎಫ್ಐ ಮುಖಂಡರಾದ ಯಮನೂರ, ನಾಗರಾಜ ಬಳ್ಳಾರಿ, ಹನುಮೇಶ, ಅಮರೇಶ, ತಿಪ್ಪಣ್ಣ, ವಿನೋದ್, ದೇವರಾಜ್, ಚೇತನ್, ಅನ್ವರ್, ಬಸವರಾಜ್, ಗವಿಸಿದ್ದಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X