ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಇದೇ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಪ್ರಾರಂಭವಾಗುತ್ತಿದೆ. ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇಶಕರ ನಿರ್ದೇಶನದಂತೆ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮತ್ತು ದೇವದಾಸಿಯರ ಮರು ಸಮೀಕ್ಷೆ ನಡೆಸಲಾಗುತ್ತಿದೆ. ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ. ದೇವದಾಸಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ನಿಗದಿಪಡಿಸಿದ ಅವಧಿಯೊಳಗಾಗಿ ಮೇಲ್ಕಂಡ ನಿಗದಿಪಡಿಸಿದ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: ಗದಗ | ನೂರಾರು ರೈತರು ಭಿಕ್ಷಾಟನೆ ಮೂಲಕ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನುಪಮಾ ಅಂಗಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ದಾಕ್ಷಾಯಣಿ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ರಫೀಕಾ ಹಳ್ಳೂರ ಮತ್ತು ಇಲಾಖಾ ಸಿಬ್ಬಂದಿಗಳು ಹಾಗೂ ಸಮುದಾಯ ಆಧಾರಿತ ಸಂಸ್ಥೆಯವರು ಇದ್ದರು.