ಗದಗ | ಅರಣ್ಯ ಸಂರಕ್ಷಕರು ಹಸಿರಿನ ಹರಿಕಾರರು: ನ್ಯಾ.ಗಂಗಾಧರ ಎಂ ಸಿ

Date:

Advertisements

ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು ಎಂದು ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾದರ ಎಂ ಸಿ ಅವರು ಹೇಳಿದರು.

ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಅರಣ್ಯ ಇಲಾಖೆಯಿಂದ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಜರುಗಿದ ರಾಷ್ಟೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, “ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ ಅವರ ತ್ಯಾಗ ಬಲಿದಾನವನ್ನು ನಾವೆಲ್ಲರೂ ನೆನೆಯುವ ಮೂಲಕ ಅರಣ್ಯ ಸಂರಕ್ಷಣೆಗೆ ಶ್ರಮಿಸಿದ ಸರ್ವರಿಗೂ ಆಭಾರಿಗಳಾಗಿರೋಣ. ಅರಣ್ಯ ಸಂರಕ್ಷಣೆಯಲ್ಲಿ ಹುತಾತ್ಮರಾದವರ ತ್ಯಾಗ ಬಲಿದಾನ ರಾಷ್ಟ್ರಕ್ಕೆ ಆದ ನಷ್ಟ. ನೈಸರ್ಗಿಕ ಸಂಪತ್ತು ರಕ್ಷಣೆ ಕಾರ್ಯ ನಮ್ಮೆಲ್ಲರದ್ದು. ಪ್ರಕೃತಿ ಇಂದು ನಮಗೆಲ್ಲ ಶುದ್ಧ, ಸುಂದರ ವಾತಾವರಣ ಕಲ್ಪಿಸಿದೆ. ಇದರ ರಕ್ಷಣೆಯಲ್ಲಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಶ್ರಮ ಅಪಾರವಾಗಿದೆ” ಎಂದು ಅಭಿಪ್ರಾಯ ಪಟ್ಟರು.

“ಇಂದು ಹುತಾತ್ಮರನ್ನು ಕೇವಲ ಸ್ಮರಿಸುವ ದಿನವಲ್ಲ. ಜೊತೆಗೆ ನಾವೆಲ್ಲರೂ ಪರಿಸರ ಸಂರಕ್ಷಣೆ ಹೊಣೆ ಹೊರುವ ದಿನ. ನಿರಂತರವಾಗಿ ನಡೆಯುವ ಅಕ್ರಮ ಪ್ರಾಣಿ ಬೇಟೆ ತಡೆಯಬೇಕು. ಪ್ರಕೃತಿಯಲ್ಲಿನ ಒಂದಿಲ್ಲೊಂದು ಲಾಭ ಪಡೆಯುವ ನಾವೆಲ್ಲರೂ ಪ್ರಕೃತಿ ಸಂರಕ್ಷಣೆ ಮಾಡುವ ಹೊಣೆಗಾರಿಕೆ ನಿರ್ವಹಿಸೋಣ” ಎಂದರು.

“ಕೋವಿಡ್ ವೇಳೆ ಅದೆಷ್ಟೋ ಜನರು ಆಕ್ಸಿಜನ್ ಕೊರತೆಯಿಂದ ಅಸು ನೀಗಿದರು. ಅಂದೇ ನಮಗೆಲ್ಲ ಅರಿವಾದದ್ದು ಶುದ್ಧ ಗಾಳಿಯ ಬೆಲೆ ಅಧಿಕವಾಗಿದೆ ಎಂದು. ಉತ್ತಮ ಪ್ರಕೃತಿಯನ್ನು ಮಲಿನಗೊಳಿಸದೇ ಮುಂದಿನ ಭವಿಷ್ಯಕ್ಕೆ ಮೀಸಲಿಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರಕೃತಿಯಲ್ಲಿನ ಇಂತಹ ಶುದ್ಧ ಗಾಳಿ ನಮಗೆಲ್ಲ ಉಚಿತವಾಗಿ ದೊರೆಯುತ್ತದೆ. ಈ ಪ್ರಕೃತಿಯ ಋಣ ತೀರಿಸುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಿದೆ. ಪ್ರಕೃತಿ ನಮಗೆ ಉಚಿತವಾಗಿ ಆಹಾರ ಶುದ್ಧ ಗಾಳಿ ವಾತಾವರಣ ನೀಡುತ್ತಿದೆ. ಅದನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯಕ್ಕೆ ನಾವೆಲ್ಲರೂ ಮುಂದಾಗೋಣ” ಎಂದರು.

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಮಾತನಾಡಿ, “ನಾವಿಂದು ಪರಿಸರ ಬದಲಾವಣೆಯಿಂದಾಗುವ ಆಗುವ ಅನಾಹುತಗಳನ್ನು ಎದುರಿಸುತ್ತಿದ್ದೇವೆ. ಪರಿಸರ ಸಂರಕ್ಷಣೆಯ ಕಾಳಜಿ ಹೊಣೆಗಾರಿಕೆಯನ್ನು ನಿಭಾಯಿಸುತ್ತಿಲ್ಲ. ಮನುಷ್ಯನನ್ನು ಬಿಟ್ಟು ಎಲ್ಲವನ್ನೂ ಸಹ ಪರಿಸರವೆಂದು ಪರಿಗಣಿತವಾಗುತ್ತದೆ. ಅಂತಹ ಪರಿಸರದ ಮೇಲೆ ಮಾನವನ ಅತಿಯಾದ ದುರಾಸೆಯಿಂದಾಗಿ ಹಾನಿ ಮಾಡುತ್ತಾ ಪ್ರಕೃತಿ ಅಸಮತೋಲನಕ್ಕೆ ಕಾರಣರಾಗಿದ್ದೇವೆ. ಮನುಷ್ಯನ ಅಗತ್ಯತೆಗಳು ಅಗಾಧವಾಗಿ ಪರಿಸರ ಸಂಪತ್ತು ವಿನಾಶದತ್ತ ಸಾಗಿದೆ. ಅರಣ್ಯ ಹುತಾತ್ಮರು ಪ್ರಾಣಿಗಳಿಂದ ಆದವರು ಕಡಿಮೆ. ಮನುಷ್ಯರಿಂದಲೇ ಹತ್ಯೆಯಾದವರ ಸಂಖ್ಯೆ ಅಧಿಕವಾಗಿದೆ. ಪರಿಸರ ಸಂರಕ್ಷಣೆಯೊAದಿಗೆ ನಾಳಿನ ಭವಿಷ್ಯದ ಪೀಳಿಗೆಗೆ ಉತ್ತಮ ಪ್ರಕೃತಿ ನೀಡುವ ವಾಗ್ದಾನ ನಮ್ಮದಾಗಲಿ” ಎಂದು ನುಡಿದರು.

ಇದನ್ನೂ ಓದಿ: ಗದಗ | ಕ್ರೀಡೆಗಳಿಂದ ಮಾನಸಿಕ-ದೈಹಿಕ ಸದೃಢತೆ ಸಾಧ್ಯ: ಡಿಸಿ ಶ್ರೀಧರ್

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಮಾತನಾಡಿ, “ನಮ್ಮ ಉತ್ತಮ ಭವಿಷ್ಯಕ್ಕಾಗಿ ತಮ್ಮ ತ್ಯಾಗ ಬಲಿದಾನದ ಮೂಲಕ ಅರಣ್ಯ ಸಂರಕ್ಷಣೆ ಮಾಡಿದವರನ್ನು ನೆನೆಯೋಣ. ಅರಣ್ಯ ಸಂಪತ್ತು ಕೇವಲ ಮರಗಳು, ಪ್ರಾಣಿಗಳಷ್ಟೇ ಅಲ್ಲ. ಅರಣ್ಯ ಇಲ್ಲದೇ ಮಳೆಯೂ ಇಲ್ಲ. ಜೀವವೂ ಇಲ್ಲ. ಜೀವನವೂ ಇಲ್ಲ ಎಂಬುದನ್ನು ನಾವೆಲ್ಲರೂ ಅರಿತು ಸಂರಕ್ಷಣೆ ಕಾರ್ಯದಲ್ಲಿ ನಮ್ಮದೇ ಆದ ಕೊಡುಗೆ ನೀಡೋಣ ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಅನೇಕರ ತ್ಯಾಗ ಬಲಿದಾನ ಸಮರ್ಪಣಾ ಮನೋಭಾವದಿಂದಾಗಿ ಇಂದು ಅರಣ್ಯಗಳು ಜೀವಂತವಾಗಿವೆ. ಅದಕ್ಕಾಗಿಯೇ ನಾವೆಲ್ಲರೂ ಜೀವಂತವಾಗಿದ್ದೇವೆ ಎಂಬುದನ್ನು ಮರೆಯಬಾರದು. ರಾಜ್ಯದಲ್ಲಿ 1966 ರಿಂದ ಈವರೆಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ 62 ನೌಕರರು ಹುತಾತ್ಮರಾಗಿದ್ದು ಅವರೆಲ್ಲರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಬಿಂಕದಕಟ್ಟಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು” ಎಂದರು.

ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಮುಖ್ಯ ಅತಿಥಿಗಳಿಂದ ಹಾಗೂ ವಿವಿಧ ರಂಗಗಳ ಪ್ರತಿನಿಧಿಗಳಿಂದ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದವರಿಗೆ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮೌನಾಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ ವರಿಷ್ಟಾದಿಕಾರಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಚಂದ್ರಹಾಸ ವೆರ್ಣೆಕರ್ , ವಾರ್ತಾಧಿಕಾರಿ ವಸಂತ ಮಡ್ಲೂರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಪ್ರಕಾರ ಪವಾಡಿಗೌಡ್ರ, ಮೇಘನಾ ಎಚ್, ವೀರೇಂದ್ರ ಮರಿಸಬಣ್ಣವರ, ಮಂಜುನಾಥ ಮೇಗಳಮನಿ, ರಾಮಪ್ಪ ಪೂಜಾರ, ಸ್ನೇಹಾ ಕೊಪ್ಪಳ, ವೀರಭದ್ರಪ್ಪ ಕುಂಬಾರ ಅನ್ವರ ಕೊಲ್ಹಾರ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X