‘ಮಣಿಪುರದ ಹಿಂಸಾಚಾರ ದುರದೃಷ್ಟಕರ’; 28 ತಿಂಗಳ ಬಳಿಕ ಮೋದಿ ಭೇಟಿ

Date:

Advertisements

“ಮಣಿಪುರದ ಜನರೊಂದಿಗೆ ಸರ್ಕಾರ ಇದೆ. ರಾಜ್ಯವನ್ನು ಶಾಂತಿ ಮತ್ತು ಸಮೃದ್ಧಿಯ ಸಂಕೇತವನ್ನಾಗಿ ಮಾಡಲು ಸರ್ಕಾರ ಬಯಸಿದೆ. ಹಿಂಸಾಚಾರವನ್ನು ಮಣಿಪುರದ ಜನತೆ ದೂರ ಇಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

2023ರ ಮೇ 3ರಂದು ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಶುರುವಾದ ಕಲಹದಿಂದಾಗಿ ಮಣಿಪುರ ಎರಡು ಇಬ್ಭಾಗವಾಗಿ 28 ತಿಂಗಳಾದ ಬಳಿಕ, ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದಾರೆ.

ಕುಕಿ ಪ್ರಾಬಲ್ಯದ ಚೂರಾಚಾಂದ್ಪುರ ಜಿಲ್ಲೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಶಾಂತಿಗಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ನಿರಂತರ ಪ್ರಯತ್ನಗಳು ಎರಡೂ ಕಡೆಯ ನಡುವೆ ಮಾತುಕತೆಗೆ ಕಾರಣವಾಯಿತು” ಎಂದಿದ್ದಾರೆ.

“ಇಲ್ಲಿ ಹಿಂಸಾಚಾರ ನಡೆದಿರುವುದು ದುರದೃಷ್ಟಕರ. ಇಂದು, ಭಾರತ ಸರ್ಕಾರ ನಿಮ್ಮೊಂದಿಗಿದೆ. ನಾನು ನಿಮ್ಮೊಂದಿಗಿದ್ದೇನೆ ಎಂದು ಭರವಸೆ ನೀಡಲು ಬಯಸುತ್ತೇನೆ” ಎಂದಿದ್ದಾರೆ. “ಶಾಂತಿಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲು ಎಲ್ಲ ಗುಂಪುಗಳು ಮತ್ತು ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಅಭಿವೃದ್ಧಿಗಾಗಿ ಶಾಂತಿ ಅತ್ಯಂತ ಮುಖ್ಯ. ಕೇಂದ್ರ ಸರ್ಕಾರ ಶಾಂತಿಯನ್ನು ಸಾಧಿಸಲು ಬದ್ಧವಾಗಿದೆ. ರಾಜ್ಯದಲ್ಲಿ ರೈಲ್ವೆ ಮತ್ತು ರಸ್ತೆ ಸಂಪರ್ಕ ಯೋಜನೆಗಳಿಗೆ ಕೇಂದ್ರವು ಬಜೆಟ್ ಹಂಚಿಕೆಯನ್ನು ಹೆಚ್ಚಿಸಿದೆ ಎಂದು ವಿವರಿಸಿದ್ದಾರೆ.

“ಮಣಿಪುರದಲ್ಲಿ ಸಂಪರ್ಕವನ್ನು ಸುಧಾರಿಸಲು ನಾನು 2014ರಿಂದಲೂ ವಿಶೇಷ ಒತ್ತು ನೀಡಿದ್ದೇನೆ. ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅಭಿವೃದ್ಧಿಯ ಫಲಗಳು ದೇಶದ ಮೂಲೆ ಮೂಲೆಗೂ ತಲುಪುವಂತೆ ನೋಡಿಕೊಳ್ಳಲು ನಾನು ಬಯಸುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

ಮಣಿಪುರವನ್ನು ಧೈರ್ಯ ಮತ್ತು ಶೌರ್ಯದ ಭೂಮಿ ಎಂದು ಶ್ಲಾಘಿಸಿದ ಪ್ರಧಾನಿ, “ಇಂಫಾಲ್‌ನಿಂದ ಚೂರಾಚಾಂದ್ಪುರಕ್ಕೆ ರಸ್ತೆ ಮೂಲಕ ಹೋಗುವ ದಾರಿಯಲ್ಲಿ ನನಗೆ ದೊರೆತ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಬಣ್ಣಿಸಿದ್ದಾರೆ.

“ನಿರಾಶ್ರಿತ ಜನರೊಂದಿಗೆ ಮಾತನಾಡಿದೆ. ಮಣಿಪುರ ಹೊಸ ಉದಯದತ್ತ ನೋಡುತ್ತಿದೆ ಎಂದು ನಾನು ಹೇಳಬಲ್ಲೆ. ಜನರು ಶಾಂತಿಯ ಹಾದಿಯನ್ನು ಆರಿಸಿಕೊಂಡಿದ್ದಾರೆ. ಇಲ್ಲಿ ಅನಾವರಣಗೊಳಿಸಿದ ಯೋಜನೆಗಳು ಮೂಲಸೌಕರ್ಯ ಮತ್ತು ಆರೋಗ್ಯ ರಕ್ಷಣೆಯ ವಿಷಯದಲ್ಲಿ ಜನರ ಜೀವನವನ್ನು ಸುಧಾರಿಸುತ್ತವೆ” ಎಂದು ಭರವಸೆ ನೀಡಿದ್ದಾರೆ.

7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಮಣಿಪುರದಲ್ಲಿ ಚಾಲನೆ ನೀಡಲಾಗಿದೆ. “ಈ ಯೋಜನೆಗಳು ಮಣಿಪುರದ ಜನರ, ವಿಶೇಷವಾಗಿ ಬೆಟ್ಟಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜೀವನವನ್ನು ಮತ್ತಷ್ಟು ಸುಧಾರಿಸುತ್ತವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X