ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮಿ ಅವರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಅವರು ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದಾರೆ. ಅವರ ಮನೆಯಿಂದ 3 ಲಕ್ಷ ರೂಪಾಯಿ ಕಳವು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? ಕೈ ಚೀಲದಲ್ಲಿ ಮಲ್ಲಿಗೆ ಹೂ: ಆಸ್ಟ್ರೇಲಿಯಾದಲ್ಲಿ ನಟಿ ನವ್ಯಾ ನಾಯರ್‌ಗೆ 1.14 ಲಕ್ಷ ರೂ. ದಂಡ
ಸೆಪ್ಟೆಂಬರ್ 4-8ರ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ವಿಜಯಲಕ್ಷ್ಮಿ ಅವರು ನಾಗರಾಜು ಅವರ ಬಳಿ ಸ್ವಲ್ಪ ಹಣವನ್ನು ಬೆಡ್ರೂಂನ ವಾರ್ಡ್ರೋನಲ್ಲಿ ಇರುವಂತೆ ಸೂಚಿಸಿದ್ದರು. ಆ ಬಳಿಕ ಇವರು ಮೈಸೂರಿಗೆ ತೆರಳಿದ್ದರು. ಸೆಪ್ಟೆಂಬರ್ 8ರಂದು ಬಂದು ನೋಡಿದಾಗ ಹಣ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರನ್ನು ಕೇಳಿದರೂ ಯಾರೊಬ್ಬರೂ ಹಣದ ಬಗ್ಗೆ ಮಾಹಿತಿ ನೀಡಲಿಲ್ಲ. ಹೀಗಾಗಿ, ದೂರು ದಾಖಲು ಮಾಡಲಾಗಿದೆ.
ವಿಜಯಲಕ್ಷ್ಮಿ ಅವರು ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಮನೆ ಕೆಲಸದವರ ಮೇಲೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.