ಜಾಮೀನು ಅರ್ಜಿಗಳನ್ನು 2 ತಿಂಗಳಲ್ಲಿ ನಿರ್ಧರಿಸಬೇಕು: ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

Date:

Advertisements

ಜಾಮೀನು ಮತ್ತು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆಯಾದ ಎರಡು ತಿಂಗಳುಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕು ಅಥವಾ ಅವುಗಳ ವಿಚಾರದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಮಹಾರಾಷ್ಟ್ರದ ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ಧ ಆಸ್ತಿ ದಾಖಲೆಗಳಲ್ಲಿ ವಂಚನೆ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ. ತಮ್ಮ ವಿರುದ್ಧದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್‌ ತೀರ್ಪುನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠವು ಹೈಕೋರ್ಟ್‌ ಆದೇಶವನ್ನು ಎತ್ತಿಹಿಡಿದಿದೆ. ಇದೇ ಸಮಯದಲ್ಲಿ, ನ್ಯಾಯಾಲಯಗಳಲ್ಲಿ ಹೆಚ್ಚಾಗಿ ಜಾಮೀನು ಅರ್ಜಿಗಳು ಬಾಕಿ ಉಳಿಯುತ್ತಿರುವ ಬಗ್ಗೆ ಗಮನಿಸಿದೆ.

“ಅರ್ಜಿದಾರರ ವಿರುದ್ಧದ ಗಂಭೀರ ಆರೋಪಗಳನ್ನು ಪರಿಗಣಿಸಿ ಕಸ್ಟಡಿ ವಿಚಾರಣೆಯ ಅಗತ್ಯವಿದೆ ಎಂಬುದು ಎದ್ದು ಕಾಣುತ್ತದೆ. ಆದರೂ, ಅವರ ಅರ್ಜಿಗಳನ್ನು ನಿಧರಿಸುವಲ್ಲಿ ನ್ಯಾಯಾಲಯದ ವಿಳಂಬವು ಸಮರ್ಥನೀಯವಲ್ಲ” ಎಂದು ಕೋರ್ಟ್‌ ಹೇಳಿದೆ.

ಈ ಲೇಖನ ಓದಿದ್ದೀರಾ?: ಮೋದಿ-ಕ್ಸಿ-ಪುಟಿನ್ ಭೇಟಿ: ಅಮೆರಿಕ ವಿರುದ್ಧ ಪ್ರಬಲ ಗುಂಪು ರಚನೆ ಸಾಧ್ಯವೇ?

“ಜಾಮೀನು ಅರ್ಜಿಗಳ ವಿಚಾರಣೆ ಮತ್ತು ವಿಲೇವಾರಿಯಲ್ಲಿನ ವಿಳಂಬವು ಸರಿಯಾದ ಪ್ರಕ್ರಿಯೆಯಲ್ಲ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿಗೆ ಧಕ್ಕೆಯುಂಟುಮಾಡುತ್ತದೆ” ಎಂದು ವೈಯಕ್ತಿಕ ಸ್ವಾತಂತ್ರ್ಯದ ಸಾಂವಿಧಾನಿಕ ಮಹತ್ವವನ್ನು ಒತ್ತಿ ಹೇಳಿದೆ.

“ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಲೇವಾರಿಯಲ್ಲಿ ಸುದೀರ್ಘ ವಿಳಂಬವು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಉದ್ದೇಶವನ್ನು ವಿಫಲಗೊಳಿಸುತ್ತದೆ. ಕಕ್ಷಿದಾರರಿಂದಲೇ ವಿಳಂಬವಾಗುವ ಅರ್ಜಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅರ್ಜಿಗಳನ್ನು ಸಲ್ಲಿಕೆಯಾದ ಎರಡು ತಿಂಗಳೊಳಗೆ ನಿರ್ಧರಿಸಬೇಕು” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X