ವಿಜಯಪುರ | ಚುನಾವಣೆಗಳಲ್ಲಿ ಕಾಂಗ್ರೆಸ್ ಬಲಪಡಿಸಲು ಮತದಾರರ ಜಾಗೃತಿ ಅಗತ್ಯ

Date:

Advertisements

ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ನಿರ್ದೆಶನದ ಮೇರೆಗೆ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮನೆ ಮನೆಗೆ ತೆರಳಿ ಮತದಾರರನ್ನು ಜಾಗೃತಗೊಳಿಸುವ ಮೂಲಕ ಚುನಾವಣಾ ಆಯೋಗ ಹಾಗೂ ಬಿಜೆಪಿಯ ಕುತಂತ್ರಗಳನ್ನು ಬಯಲುಗೊಳಿಸಬೇಕು. ಚುನಾವಣೆಗಳಲ್ಲಿ ಕಾಂಗ್ರೆಸ್‌ ಬಲಪಡಿಸಲು ಮತದಾರರ ಜಾಗೃತಿ ಅಗತ್ಯ ಎಂದು ಕೆಪಿಸಿಸಿ ಸೇವಾದಳದ ರಾಜ್ಯಾಧ್ಯಕ್ಷ ಎಂ ರಾಮಚಂದ್ರಪ್ಪ ತಿಳಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

“ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿ ತಿಂಗಳ ಕೊನೆಯ ವಾರದಂದು ಪಕ್ಷದ ಕಚೇರಿಯ ಎದುರು ರಾಷ್ಟ್ರ ಧ್ವಜಾರೋಹಣ ಮಾಡಿ ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ ಮೂಡಿಸಬೇಕು. ಮುಂದಿನ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ಮೂರು ದಿನದ ಬೃಹತ್ ತರಬೇತಿ ಕಾರ್ಯಕ್ರಮ ಮಾಡಬೇಕು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಉಪಸ್ಥಿತರಿರುವರು. ಆ ತರಬೇತಿ ಶಿಬಿರವನ್ನು ತಾವೆಲ್ಲರೂ ಯಶಸ್ವಿಗೊಳಿಸಬೇಕು” ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, “ಸಂಘಟನೆಯಲ್ಲಿ ತಾವೆಲ್ಲರೂ ಪ್ರಾಮಾಣಿಕತೆಯಿಂದ ದುಡಿದರೆ ಪಕ್ಷ ನಿಮ್ಮನ್ನು ಮುಂದೊಂದು ದಿನ ಗುರುತಿಸಿ ನಿಮಗೆ ಉತ್ತಮವಾದ ಸ್ಥಾನಮಾನ ಕೊಟ್ಟೇ ಕೊಡುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಜಾತಿ, ಭೇದ ಭಾವ ಯಾವುದೇ ಇಲ್ಲ. ಇಲ್ಲಿ ರಾಷ್ಟದ, ರಾಜ್ಯದ ಒಳತಿಗಾಗಿ ಸರ್ವಜನರ ಹಿತಾಶಕ್ತಿ ಕಾಪಾಡುವದರ ಜೊತೆಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸಿದ್ದಂತದೊಂದಿಗೆ ಜನರ ಒಳಿತು ಮಾಡುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ತಾವೆಲ್ಲರೂ ನಿಷ್ಠೆ ಹಾಗೂ ಶಿಸ್ತಿನಿಂದ ಪಕ್ಷದ ಸಂಘಟನೆ ಮಾಡುವದರ ಮೂಲಕ ಮುಂಬರುವ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಬಾರಿಸಲು ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡೋಣ” ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಡಾ. ಗಂಗಾಧರ ಸಂಬಣ್ಣಿ, ರಾಜ್ಯ ಸೇವಾದಳದ ಕಾರ್ಯದರ್ಶಿ ರಮೇಶ, ಶಬ್ಬೀರ ಜಾಗಿರದಾರ, ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಬ್ದುಲ ಹಮೀದ ಮುಶ್ರೀಫ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ರಾಜ್ಯ ಸೇವಾದಳದ ಕಾರ್ಯದರ್ಶಿ ರಾಜೇಶ್ವರಿ ಚೋಳಕೆ, ಜಿಲ್ಲಾ ಸೇವಾದಳದ ಅಧ್ಯಕ್ಷ ವಿಜಯಕುಮಾರ ಕಾಳೆ, ಜಿಲ್ಲಾ ಸೇವಾದಳದ ಮಹಿಳಾ ಅಧ್ಯಕ್ಷೆ ಸಮೀನಾ ಮಂಟೂರ, ಶರಣಪ್ಪ ಯಕ್ಕುಂಡಿ, ಸಂತೋಷ ಬಾಲಗಾವಿ, ಪ್ರಕಾಶ ಗುಣದಾಳ, ರಮಜಾನ ಹೆಬ್ಬಾಳ, ಮೀನುಗಾರಿಗೆ ಜಿಲ್ಲಾ ಅಧ್ಯಕ್ಷ ಕೃಷ್ಣಾ ಕಾಮಟೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಜಿಲ್ಲಾ ಸೇವಾದಳದ ಪದಾಧಿಕಾರಿಗಳಾದ ಸಿದ್ದಪ್ಪ ಚಡಚಣ, ಅಪ್ಪಾಸಲಿ ಪಿಂಜಾರ, ಮಲ್ಲಿಕಾರ್ಜುನ ಯಂಕಚಿ, ಅಕ್ಬರ ಗೋತಾವಿ, ಪ್ರಶಾಂತ ಪೂಜಾರಿ, ರಾಚಪ್ಪ ಬಂತನಾಳ, ಲಾಲಸಾಬ ಜಮಾದಾರ, ಬಸಪ್ಪ ಕೋಲಕಾರ, ಗೋಪಿನಾಥ ಜಮಾದಾರ, ಗಾಲಿಬಸಾಬ ನಾಗಾಂವಿ, ದಿಲಿಪಿ ಪ್ರಭಾಕರ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X