ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಐವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಬೀದರ್‌ನ ಶಿಕ್ಷಕ, ಸಾಹಿತಿ ಡಾ.ರಘುಶಂಖ ಭಾತಂಬ್ರಾ, ಪತ್ರಕರ್ತ ಸುನೀಲ ಭಾವಿಕಟ್ಟಿ, ಲೇಖಕಿ ರಜೀಯಾ ಬಳಬಟ್ಟಿ, ಕಸಾಪ ಬೀದರ್ ತಾಲೂಕಾಧ್ಯಕ್ಷ ಟಿ.ಎಂ.ಮಚ್ಚೆ ಹಾಗೂ ಭಾಲ್ಕಿಯ ಸಂಘಟಕ ಅಂಬ್ರರೀಶ ಮಲ್ಲೇಶಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟಗಳಲ್ಲಿ, ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 249 ಸದಸ್ಯರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!