ಪ್ರಧಾನಿ ನರೇಂದ್ರ ಮೋದಿಯ ಮಣಿಪುರ ಭೇಟಿ ಕೇವಲ ಪ್ರಹಸನ: ಮಲ್ಲಿಕಾರ್ಜುನ ಖರ್ಗೆ

Date:

Advertisements

ಪ್ರಧಾನಿ ನರೇಂದ್ರ ಮೋದಿಯ ಮಣಿಪುರ ಭೇಟಿಯನ್ನು ಮಧ್ಯಂತರ ವಿರಾಮ ಎಂದು ಬಣ್ಣಿಸಿರುವ ಕಾಂಗ್ರೆಸ್, ಈ ಭೇಟಿ ಪ್ರಹಸನವಾಗಿದ್ದು, ರಾಜ್ಯಕ್ಕೆ ಮಾಡುತ್ತಿರುವ ಘೋರ ಅವಮಾನವೆಂದು ಟೀಕಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ತಮಗೆ ತಾವೇ ಅದ್ದೂರಿ ಸ್ವಾಗತ ಏರ್ಪಡಿಸಿಕೊಂಡಿದ್ದಾರೆ ಹಾಗೂ ಮಣಿಪುರದ ಜನತೆ ಈಗಲೂ ಅನುಭವಿಸುತ್ತಿರುವ ನೋವಿಗೆ ಇದು ಕ್ರೂರ ತಿವಿಯುವಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮದೇ ಮಾತಿನಲ್ಲಿ ಹೇಳುವುದಾದರೆ, ಎಲ್ಲಿದೆ ರಾಜಧರ್ಮ?” ಎಂದು ಅವರು ಪ್ರಧಾನಿ ಮೋದಿಯನ್ನು ಕಟುವಾಗಿ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

“ನರೇಂದ್ರ ಮೋದಿಯವರೆ ನಿಮ್ಮ ಮೂರು ಗಂಟೆಯ ಮಣಿಪುರದಲ್ಲಿನ ಮಧ್ಯಂತರ ವಿರಾಮ ಸಹಾನುಭೂತಿಯಲ್ಲ; ಅದೊಂದು ಪ್ರಹಸನ, ಔಪಚಾರಿಕತೆ ಹಾಗೂ ಮನನೊಂದ ರಾಜ್ಯದ ಜನತೆಗೆ ಮಾಡುತ್ತಿರುವ ಘೋರ ಅವಮಾನವಾಗಿದೆ. ಇಂಫಾಲ ಹಾಗೂ ಚೂರಚಂದ್ ಪುರ್ ನಲ್ಲಿ ನೀವು ಆಯೋಜಿಸಿರುವ ರೋಡ್ ಶೋ ಪರಿಹಾರ ಶಿಬಿರಗಳಲ್ಲಿನ ಜನರ ಆಕ್ರಂದನಗಳನ್ನು ಕೇಳುವುದರಿಂದ ತಪ್ಪಿಸಿಕೊಳ್ಳುವ ಹೇಡಿತನವಾಗಿದೆ” ಎಂದು ಹೇಳಿದ್ದಾರೆ.

“864 ದಿನಗಳ ಹಿಂಸಾಚಾರ: 300 ಜನರ ಸಾವು, 67,000 ಮಂದಿ ನಿರ್ವಸತಿಗರು, 1,500ಕ್ಕೂ ಹೆಚ್ಚು ಮಂದಿ ಗಾಯಾಳುಗಳು. ಅಂದಿನಿಂದ ನೀವು 46 ವಿದೇಶಿ ಪ್ರವಾಸಗಳನ್ನು ಕೈಗೊಂಡಿದ್ದೀರಿ. ಆದರೆ, ನಿಮ್ಮದೇ ಪ್ರಜೆಗಳಿಗೆ ಒಂದೆರಡು ಸಹಾನುಭೂತಿಯ ಮಾತುಗಳನ್ನಾಡಲು ಒಂದೂ ಭೇಟಿ ನೀಡಿರಲಿಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X