ಗದಗ | ಸೆ. 15ರಿಂದ ಬಗರ್ ಹುಕುಂ ಸಾಗುವಳಿದಾರರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

Advertisements

“ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು, ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರ ವಿರುದ್ದ ಸೆಪ್ಟೆಂಬರ್ 15 ರಿಂದ ತಹಶಿಲ್ದಾರರ ಕಚೇರಿ ಮುಂಭಾದಲ್ಲಿ ಅನಿರ್ದಿಷ್ಟಾವಧಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ  ಉಪಾಧ್ಯಕ್ಷ ಜಿ.ನಾಗರಾಜ್ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ ಸಭಾ ಭವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಸಭೆ ಉದ್ದೇಶಿಸಿ ಮಾತನಾಡಿದರು.

“ಮಾರ್ನಾಲ್ಕು ತಲೆಮಾರುಗಳಿಂದ  ಉಳುವೆ ಮಾಡುತ್ತಾ, ಅದೇ ಜಮೀನಿನಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ರೈತರಿಗೆ  ಭೂಮಿ‌ ನೀಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಿನಾಮೇಷ ಎಣಿಸುತ್ತಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಉಳುಮೆ ಮಾಡುವ ರೈತರಿಗೆ ಜಮೀನು ನೀಡಲು ಏನೇನೋ ಸಬೂಬು ಹೇಳುವ ಅಧಿಕಾರಿಗಳು, ದೊಡ್ಡ-ದೊಡ್ಡ ಪ್ಯಾನ್ ಕಂಪನಿಗಳಿಗೆ ಬೇಕಾದಷ್ಟು ಭೂಮಿಯನ್ನು ಧಾರಾಳವಾಗಿ ಬರೆದುಕೊಡುತ್ತಿದ್ದಾರೆ. ಇದರಿಂದ ರೈತರ ಮೇಲಿನ ಕಾಳಜಿ ಎಂತಹದ್ದು ಎನ್ನುವುದನ್ನು ತೋರಿಸುತ್ತಿದ್ದೆ” ಎಂದರು.

ಕೃಷಿಕೂಲಿಕಾರರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ ಮಾತನಾಡಿ, “ಬಗರ್ ಹುಕಂ ಸಾಗುವಳಿದಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅನೇಕ ಬಾರಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಎಸಿ ಸೇರಿ ವಿವಿಧ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಯಾರೂ ಗಮನ ಹರಿಸಿಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಯಾವುದೇ ರೈತರನ್ನು ಒಕ್ಕಲೆಬ್ಬಿಸದೇ ಕಾಯ್ದೆಯಡಿ ಪರಿಶೀಲಿಸಿ ಹಕ್ಕುಪತ್ರ, ಸಾಗುವಳಿ ಚೀಟಿ ನೀಡಬೇಕು ಆದರೆ ತಾಲೂಕಿನಲ್ಲಿ 511 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ತಿರಸ್ಕರಿಸಲಾಗಿದೆ” ಎಂದರು.

“ಬಗರ ಹುಕುಂ ಭೂ ಮಂಜೂರಾತಿ ಸಮಿತಿಯ ಅಧ್ಯಕ್ಷರು ಶಾಸಕರೇ ಇರುವುದರಿಂದ ತಹಶಿಲ್ದಾರ ಅವರು ಕಾರ್ಯದರ್ಶಿಯಾಗಿದ್ದು, ಯಾವುದೇ ರೀತಿಯ ಚೌಕಾಸಿ ನಡೆಸದೇ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ. ಅರ್ಹ ರೈತರಿಗೆ ಸಿಗಬೇಕಾದ ಭೂಮಿಯನ್ನು ಕಸಿದುಕೊಂಡು ಕಂಪನಿಗಳಿಗೆ ನೀಡುವ ಹುನ್ನಾರ ನಡೆಸಿದ್ದಾರೆ” ಎಂದು ಆರೋಪಿಸಿದರು.

ಪ್ರಾಸ್ತಾವಿಕವಾಗಿ ಪೀರು ರಾಠೋಡ ಮಾತನಾಡಿದರುಈ ವೇಳೆ ಮುಖಂಡರು ಚೆನ್ನಪ್ಪ ಗುಗಲೋತ್ತರ, ದಾವಲಸಾಬ ತಾಳಿಕೋಟಿ, ರೂಪೇಶ ಮಾಳೋತ್ತರ, ಮೆಹಬೂಬ್ ಹವಾಲ್ದಾರ್, ಮಾರುತಿ ರಾಠೋಡ, ದೇವಲಪ್ಪ ರಾಠೋಡ, ದುರ್ಗಪ್ಪ ಮಾಳೋತ್ತರ, ಗೋವಿಂದಪ್ಪ ಗುಗುಲೋತ್ತರ, ವೀರೇಶ ರಾಠೋಡ, ಕುಮಾರ ರಾಠೋಡ, ವಿರೇಶ ಮಾಳೋತ್ತರ,  ರತ್ನವ್ವ ಮಾಳೋತ್ತರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಬಗರ್ ಹುಕುಂ ಸಾಗುವಳಿದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X