ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಭಾನುವಾರ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಟಿ-20 ಏಷ್ಯಾ ಕಪ್ ಪಂದ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.
ಪಹಲ್ಗಾಮ್ ದಾಳಿ ಸಂತ್ರಸ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪಹಲ್ಗಾಮ್ದಾಳಿಯಲ್ಲಿ ಮೃತಪಪಟ್ಟವರಿಗೆ ಮಾಡುತ್ತಿರುವ ಅವಮಾನ ಎಂದು ಕಣ್ಣೀರಾಕಿದ್ದಾರೆ. ಪಹಲ್ಲಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಕರಿಛಾಯೆ ಈ ಪಂದ್ಯದ ಮೇಲೆ ಬಿದ್ದಿದೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಬಲಿಯಾದರು. ಇದರಲ್ಲಿ ಬಹುತೇಕ ಮಂದಿ ಭಾರತದ ಪ್ರಾವಸಿಗರೇ ಆಗಿದ್ದರು. ಇದರಲ್ಲಿ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಕೂಡ ಒಬ್ಬರಾಗಿದ್ದು, ಇದೀಗ ಅವರ ಪತ್ನಿ ಪಂದ್ಯದ ವಿರುದ್ಧ ಕಿಡಿ ಕಾರಿದ್ದಾರೆ.
ಪಹಲ್ಗಾಮ್ ದಾಳಿಯ ಸಂತ್ರಸ್ತರಿಗಾಗಿ ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆಯೂ ಕರೆ ನೀಡಲಾಗಿದೆ. ಒಂದು ವೇಳೆ ಪಂದ್ಯ ಆಯೋಜನೆಯಾದರೆ ಯಾರೂ ಕೂಡಾ ವೀಕ್ಷಿಸಬಾರದು ಎಂದು ಮನವಿ ಮಾಡಲಾಗಿದೆ.
