ಮಂಗಳೂರು ನಗರದ ರಥಬೀದಿ ಬಳಿಯ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆಯಲ್ಲಿ ತೆರೆಳುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದ ಕೊಡಗು ಜಿಲ್ಲೆಯ ಕುಶಾಲನಗರದ ಮುಹಮ್ಮದ್ ರಾಶಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಆ. 9ರಂದು ತಡರಾತ್ರಿ ಸ್ಕೂಟರ್‌ನಲ್ಲಿ ಬಂದ ಆರೋಪಿಯು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಈ ಸಂಬಂಧ ಬಂದರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಅಜ್ಜತ್ ಆಲಿ ಜಿ. ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳ ತಂಡ ನಗರದ ಕೇಂದ್ರ ಮಾರುಕಟ್ಟೆ ಬಳಿ ಕಾರ್ಯಾಚರಣೆ ಕೈಗೊಂಡ ಮುಹಮ್ಮದ್ ರಾಶಿಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಸೆ.16 ರಂದು ಮಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಪೊಲೀಸರು ಆರೋಪಿಯನ್ನು ಬಂಧಿಸಿದ ಬಳಿಕ ಆತನಿಂದ ರೂ.4.50 ಲಕ್ಷ ಮೌಲ್ಯದ 42 ಗ್ರಾಂ ತೂಕದ ಚಿನ್ನದ ಹಾಗೂ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.