ಶಿವಮೊಗ್ಗ | ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಮೆಡಿಕಲ್ ರೆಪ್ ಸಾವು

Date:

Advertisements

ಶಿವಮೊಗ್ಗದ ಮಲವಗೋಪ್ಪದಲ್ಲಿ ನಡೆದ ದುರ್ಘಟನೆಯಲ್ಲಿ ಮೆಡಿಕಲ್ ರೆಪ್ರೆಸೆಂಟೇಟಿವ್ ಮಹೇಶ್ ಅವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಹೇಶ್ ಅವರು ತಮ್ಮ ದ್ವಿಚಕ್ರ ವಾಹನ ಎಥರ್ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ರಸ್ತೆಯಲ್ಲಿದ್ದ ಆಳವಾದ ಗುಂಡಿಯನ್ನು ತಪ್ಪಿಸಲು ಯತ್ನಿಸುವಾಗ ಬೈಕ್ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದರು  ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ದುರ್ಮರಣ ಹೊಂದಿದ್ದಾರೆ.

ಮಹೇಶ್ ಅವರು ನಗರದಲ್ಲೇ ಮೆಡಿಕಲ್ ರೆಪ್ರೆಸೆಂಟೇಟಿವ್ ಕೆಲಸ ಮಾಡುತ್ತಿದ್ದರು. ಅವರ ಅಕಾಲಿಕವಾಗಿ ಸಾವನ್ನಪ್ಪಿರುವುದು ಆಪ್ತರಿಗೆ ಹಾಗೂ ಪರಿಚಿತರಿಗೆ ತೀವ್ರ ಆಘಾತ ಉಂಟುಮಾಡಿದೆ. ಮೃತರು ಪತ್ನಿ ಹಾಗೂ ಒಂದು ಸಣ್ಣ ಮಗುವಿಗೆ ಅವಲಂಬಿತರಾಗಿದ್ದು, ಅವರ ಅಕಾಲಿಕ ನಿಧನವು ಕುಟುಂಬಕ್ಕೆ ಭಾರೀ ದುಃಖ ತಂದಿದೆ.

ಗ್ರಾಮಸ್ಥರ ಪ್ರಕಾರ, ಮಲವಗೋಪ್ಪ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ಗುಂಡಿಗಳು ಉಂಟಾಗಿದ್ದು, ಸಾರ್ವಜನಿಕರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿಲ್ಲ.

ಈ ಕಾರಣದಿಂದ ರಾತ್ರಿ ವೇಳೆ ವಾಹನ ಸವಾರರಿಗೆ ಅಪಘಾತಗಳ ಅಪಾಯ ಹೆಚ್ಚಾಗಿದೆ. ಮಹೇಶ್ ಅವರ ಸಾವಿಗೆ ಸಾರ್ವಜನಿಕರು ರಸ್ತೆ ನಿರ್ವಹಣೆಯ ಕೊರತೆಯೇ ಕಾರಣ ಎಂದು ಕಿಡಿಕಾರಿದ್ದಾರೆ.

ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದೇ ವೇಳೆ, ಸ್ಥಳೀಯರು ರಸ್ತೆಗಳನ್ನು ತುರ್ತುವಾಗಿ ದುರಸ್ತಿ ಮಾಡುವಂತೆ ಮಹಾನಗರ ಪಾಲಿಕೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರದ ಅಧಿಕಾರಿಗಳಿಗೆ ಇಲಾಖೆಗೆ ಸಾರ್ವಜನಿಕರು ಒತ್ತಾಯ ವ್ಯಕ್ತಪಡಿಸಿದ್ದಾರೆ.

ಮಹೇಶ್ ಅವರ ಅಕಾಲಿಕ ಸಾವು ಮಲಗೋಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕ ಹಾಗೂ ದುಃಖದ ವಾತಾವರಣವನ್ನು ಉಂಟುಮಾಡಿದೆ.

ಕುಟುಂಬಕ್ಕೆ ಸಮುದಾಯದ ಜನರು ಸಾಂತ್ವನ ಹೇಳುತ್ತಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X