ಧಾರವಾಡ | ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಸಿಇಓ ಭುವನೇಶ ಪಾಟೀಲ

Date:

Advertisements

ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ. ವೈರಲ್ ಹೆಪಟೈಟಿಸ್ ಕುರಿತು ಜಾಗೃತಿ ಮೂಡಿಸುವುದು ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಪೂರೈಸುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾಗಳ ಸಂಯುಕ್ತ ಆಶ್ರಯದಲ್ಲಿ ಸೆ. 9ರಂದು ಏರ್ಪಡಿಸಿದ್ದ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ಗ್ರಾಮೀಣ ಜನರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಸಹ ಮಾಡಬೇಕು. ಈ ಕಾಯಿಲೆ ಬಂದಿದೆ ಎಂದು ಯಾರೂ ಭಯಪಡುವ ಅವಶ್ಯಕತೆ ಇರುವುದಿಲ್ಲ. ಅದಕ್ಕಾಗಿ ಸರಕಾರದವರು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದು ಹೇಳಿದರು.

ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ ಮಾತನಾಡಿ, ಇದು ಬೇಗನೆ ಎಲ್ಲರಿಗೂ ಹರಡುವ ರೋಗ. ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು. ಆರೋಗ್ಯ ಇಲಾಖೆ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳಿಗೆ ಜನ ಸಹಕಾರ ನೀಡಿದರೆ, ಭವಿಷ್ಯದಲ್ಲಿ ಹೆಪಟೈಟಿಸ್ ಹಾಗೂ ಕ್ಷಯರೋಗ ನಿರ್ಮೂಲನೆ ಸಾಧ್ಯವಾಗುತ್ತದೆ. ಕ್ಷಯರೋಗಿಗಳಿಗಾಗಿ ನೀಡಲಾಗುತ್ತಿರುವ ಪೌಷ್ಠಿಕ ಆಹಾರವು ಅವರ ದೇಹದ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಜನರಲ್ಲಿ ರೋಗದ ಕಾರಣಗಳು, ತಡೆಗಟ್ಟುವ ಕ್ರಮಗಳು ಮತ್ತು ಚಿಕಿತ್ಸೆಯ ಕುರಿತು ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವೀಂದ್ರ ಬೊವೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಸ್ವಾಗತಿಸಿದರು. ಎನ್. ಎಂ. ಅಗಡಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಬೆಳಗಾವಿ ವಿಭಾಗದ ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ ಡಾ.ಸತೀಶ್ ಘಾಟಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಚಿತ್ತರಗಿ, ಎನ್.ವಿ.ಹೆಚ್.ಸಿ.ಪಿಯ ಫಿಜಿಶನ್ ನೋಡಲ್ ಅಧಿಕಾರಿ ಡಾ. ಕಿರಣ ಕುಲಕರ್ಣಿ ವೇದಿಕೆಯ ಮೇಲಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ರಾಷ್ಟ್ರೀಯ ಲೋಕ ಅದಾಲತ್; 203 ಪ್ರಕರಣಗಳ ಇತ್ಯರ್ಥ

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ರೋಗಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X