ಸುಪ್ರೀಂ ಕೋರ್ಟ್ ಸೋಮವಾರ 2025ರ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.
ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಮತ್ತೊಂದು ವಕ್ಫ್ ರಚಿಸಲು ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸಿದ್ದಿರಬೇಕು ಎಂಬ ಷರತ್ತು ನ್ಯಾಯಾಲಯ ತಡೆಹಿಡಿದಿರುವ ನಿಬಂಧನೆಗಳು.
ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಇದು ಅಧಿಕಾರಗಳ ಪ್ರತ್ಯೇಕತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಹಾಗೆಯೇ ವಕ್ಫ್ ರಚಿಸಲು ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸಿದ್ದಿರಬೇಕು ಎಂಬ ನಿಬಂಧನೆ ಕುರಿತಂತೆ ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುವವರೆಗೂ ಈ ನಿಯಮ ಜಾರಿಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳನ್ನು ತಾತ್ಕಾಲಿಕವಾಗಿ ತಡೆ ಹಿದಿಡು ತೀರ್ಪು ನೀಡಿದೆ.