ಮೈಸೂರು | ಜಿಲ್ಲೆಗಳಲ್ಲಿ ಸ್ಯಾಟಲೈಟ್ ಹೃದ್ರೋಗ ಕೇಂದ್ರ : ಡಾ. ಡಿ. ಬಿ. ದಿನೇಶ್

Date:

Advertisements

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತನಾಡಿದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ. ದಿನೇಶ್‌ ‘ಭವಿಷ್ಯದಲ್ಲಿ ಹೆಚ್ಚಾಗುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಹೃದ್ರೋಗ ಚಿಕಿತ್ಸೆ ದೊರಕಿಸಿಕೊಡಲು ಎಲ್ಲಾ ಜಿಲ್ಲೆಗಳಲ್ಲಿಯೂ ಸ್ಯಾಟಲೈಟ್‌ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಹೇಳಿದರು.

“2040 ರ ವೇಳೆಗೆ ಜನಸಂಖ್ಯೆ ಶೇ.15% ರಷ್ಟು ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ ಸಂಸ್ಥೆಯು ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸಿಕೊಂಡು ಸೇವೆಯನ್ನು ವಿಸ್ತರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪ್ರತೀ ಜಿಲ್ಲೆಗೊಂದು ಸ್ಯಾಟಲೈಟ್‌ ಸೆಂಟರ್‌ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಸರಕಾರದಿಂದ ಅನುಮೋದನೆ ಪಡೆದು ಸದ್ಯದಲ್ಲಿ ಕಾರ್ಯರೂಪಕ್ಕೆ ತರಲಾಗುವುದು” ಎಂದು ತಿಳಿಸಿದರು.

“ರಾಜ್ಯಾದ್ಯಂತ ‘ಡಾ. ಪುನೀತ್‌ ರಾಜ್‌ಕುಮಾರ್‌ ಸ್ಟೆಮಿ’ ಯೋಜನೆ ಜಾರಿಯಲ್ಲಿದೆ. ಇದರಿಂದ ತಾಲೂಕು ಹಂತದಲ್ಲಿಯೇ ಹೃದ್ರೋಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಸ್ಟೆಪ್ಟೊಕೈನಸ್‌ ಮತ್ತು ಟೆನೆಕ್ಟಿವ್‌ ಪ್ಲಸ್‌ ಎಂಬ ಎರಡು ಚುಚ್ಚುಮದ್ದು ನೀಡುವ ಪ್ರಾಥಮಿಕ ಚಿಕಿತ್ಸೆ ದೊರೆಯುವಂತೆ ಮಾಡಲಾಗಿದೆ. ಇದರಿಂದ ತಾಲೂಕು ಮಟ್ಟದಲ್ಲಿಯೇ ಗೋಲ್ಡನ್‌ ಅವರ್‌ನಲ್ಲಿ ಚಿಕಿತ್ಸೆ ದೊರೆಯುತ್ತಿದೆ. ಇದರಿಂದ ಸಾವಿರಾರು ಹೃದ್ರೋಗಿಗಳ ಜೀವ ಉಳಿದಿದೆ. ಹಾಗಾಗಿ, ಈ ಯೋಜನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು” ಎಂದು ತಿಳಿಸಿದರು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=K2_ysCR87bw&t=639s

ಮೈಸೂರು ಜಯದೇವಕ್ಕೆ ಐದು ಜಿಲ್ಲೆಗಳಿಂದ ಜನರು ಹೆಚ್ಚಾಗಿ ಬರುತ್ತಿದ್ದಾರೆ. ಅಲ್ಲದೇ, ನೆರೆಯ ಕೇರಳ, ಕೊಯಮತ್ತೂರಿನಿಂದಲೂ ಜನ ಬರುತ್ತಿದ್ದಾರೆ. ಆದರೆ, ಇಲ್ಲಿ ಶೇ.20% ರಷ್ಟು ವೈದ್ಯರ, ಶೇ.18% ದಾದಿಯರು, ಶೇ.15% ರಷ್ಟು ಗ್ರೂಪ್‌ ಡಿ ಕೊರತೆ ಇದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಆಗ ಒಪಿಡಿ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬ ತಪ್ಪಲಿದೆ ಎಂದು ತಿಳಿಸಿದರು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=FwDgvTROXb4

ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು ಕುಶಲೋಪರಿ ವಿಚಾರಿಸಿದ್ದಲ್ಲದೇ ಸಂಸ್ಥೆ ವ್ಯಾಪ್ತಿಯ ಗುಲ್ಪರ್ಗ, ಬೆಂಗಳೂರು, ಮೈಸೂರು ಆಸ್ಪತ್ರೆಗಳಲ್ಲಿ ಗುಣಾತ್ಮಕ ಚಿಕಿತ್ಸೆ ದೊರೆಯುವಂತೆ ಆಡಳಿತ ನಡೆಸಬೇಕು. ಅಲ್ಲದೇ, ಸೇವಾ ಅವಧಿಯಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X