2025ರ ವಕ್ಫ್ ತಿದ್ದುಪಡಿ ಕಾಯ್ದೆ | ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ಸುಪ್ರೀಂ ಕೋರ್ಟ್‌ ತಡೆ

Date:

Advertisements

ಸುಪ್ರೀಂ ಕೋರ್ಟ್ ಸೋಮವಾರ 2025ರ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.

ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಮತ್ತೊಂದು ವಕ್ಫ್ ರಚಿಸಲು ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸಿದ್ದಿರಬೇಕು ಎಂಬ ಷರತ್ತು ನ್ಯಾಯಾಲಯ ತಡೆಹಿಡಿದಿರುವ ನಿಬಂಧನೆಗಳು.

ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಇದು ಅಧಿಕಾರಗಳ ಪ್ರತ್ಯೇಕತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಹಾಗೆಯೇ ವಕ್ಫ್ ರಚಿಸಲು ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸಿದ್ದಿರಬೇಕು ಎಂಬ ನಿಬಂಧನೆ ಕುರಿತಂತೆ ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುವವರೆಗೂ ಈ ನಿಯಮ ಜಾರಿಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳನ್ನು ತಾತ್ಕಾಲಿಕವಾಗಿ ತಡೆ ಹಿದಿಡು ತೀರ್ಪು ನೀಡಿದೆ.

ಒಬ್ಬ ವ್ಯಕ್ತಿಯು ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸುವವರಾಗಿರಬೇಕು ಮತ್ತು ವಕ್ಫ್ ಅನ್ನು ರಚಿಸಲು 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು 5 ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಇಸ್ಲಾಂ ಧರ್ಮವನ್ನು ಆಚರಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯನ್ನು ನಿರ್ಧರಿಸಲು ಕಾರ್ಯವಿಧಾನವನ್ನು ಒದಗಿಸುವ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಸೆಕ್ಷನ್ 3C(2) ರಲ್ಲಿರುವ ನಿಬಂಧನೆಗೆ ಸರ್ಕಾರಿ ನಿಯೋಜಿತ ಅಧಿಕಾರಿಯು ಅತಿಕ್ರಮಣವಾಗಿದೆಯೇ ಎಂಬುದರ ಕುರಿತು ತನ್ನ ವರದಿಯನ್ನು ಸಲ್ಲಿಸುವವರೆಗೆ ವಕ್ಫ್ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ನ್ಯಾಯಾಲಯವು ಸೆಕ್ಷನ್ 3C(3) ಅನ್ನು ತಡೆಹಿಡಿದಿದೆ, ಅದು ಹೀಗೆ ಹೇಳುತ್ತದೆ – “ಒಂದು ವೇಳೆ ನಿಯೋಜಿತ ಅಧಿಕಾರಿಯು ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ನಿರ್ಧರಿಸಿದರೆ, ಅವರು ಕಂದಾಯ ದಾಖಲೆಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಮತ್ತು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಬೇಕು”. ಸೆಕ್ಷನ್ 3C(4) ಅನ್ನು ಸಹ ನ್ಯಾಯಾಲಯ ತಡೆಹಿಡಿದಿದೆ, ಅದು ರಾಜ್ಯ ಸರ್ಕಾರವು ಗೊತ್ತುಪಡಿಸಿದ ಅಧಿಕಾರಿಯ ವರದಿಯನ್ನು ಸ್ವೀಕರಿಸಿದ ನಂತರ, ದಾಖಲೆಗಳಲ್ಲಿ ಸೂಕ್ತ ತಿದ್ದುಪಡಿ ಮಾಡಲು ಮಂಡಳಿಗೆ ನಿರ್ದೇಶಿಸಬೇಕು” ಎಂದು ಹೇಳುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X