ʼಮತಪತ್ರದಲ್ಲಿ ಅಡಗಿದೆ ಪ್ರಜಾಪ್ರಭುತ್ವದ ಶಕ್ತಿʼ ಎಂಬ ಶೀರ್ಷಿಕೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ʼನನ್ನ ಮತ – ನನ್ನ ಹಕ್ಕುʼ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ ಎಸ್ ವೆಂಕಟೇಶ್ ಮಾತನಾಡಿ, “ನನ್ನ ಮತ ನನ್ನ ಹಕ್ಕು ಎಂಬ ಘೋಷಣೆ ಜನರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಸ್ತಿತ್ವವನ್ನು ನಿರ್ಧರಿಸುತ್ತದೆ. ಪ್ರತಿಯೊಬ್ಬ ಪ್ರಜೆ ತನ್ನ ಮತ ಚಲಾಯಿಸುವುದರ ಮೂಲಕ ತನ್ನ ಹಕ್ಕನ್ನು ಉಳಿಸಿಕೊಳ್ಳಬೇಕು” ಎಂದು ಹೇಳಿದರು.
ಭಾರತೀಯ ಚುನಾವಣಾ ಆಯೋಗವು ಅಲೆಮಾರಿ ಸಮುದಾಯಗಳು, ವಸತಿ ರಹಿತರು, ಲೈಂಗಿಕ ಕಾರ್ಯಕರ್ತರು, ಲಿಂಗತ್ವ ಅಲ್ಪಸಂಖ್ಯಾತರು, ಅನಾಥರು, ದಾಖಲೆಗಳಿಲ್ಲದ ನಾಗರಿಕರು ಹಾಗೂ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ಒದಗಿಸುವ ಪ್ರಯತ್ನಗಳನ್ನು ಕೈಗೊಂಡಿದೆ ಎಂಬುದನ್ನು ಅವರು ಸ್ಮರಿಸಿದರು.
ಇದನ್ನೂ ಓದಿ: ಮಂಡ್ಯ | ಮುಯ್ಯಾಳು ಸಂಸ್ಕೃತಿಯನ್ನು ಮತ್ತೆ ಮುನ್ನೆಲೆಗೆ ತಂದ ಕನ್ನಡದ ಮನಸ್ಸುಗಳು
ಕಾರ್ಯಕ್ರಮದಲ್ಲಿ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಜಯಶಂಕರ್, ಚಿಕ್ಕ ತಮ್ಮೇಗೌಡ, ಪಾನಿಪುರಿ ರವಿ, ಸುಜಾತ ಅರಸ್, ಸುಷ್ಮಾ ಸೇರಿದಂತೆ ಹಲವರು ಭಾಗವಹಿಸಿದ್ದರು.