ಗದಗ | ಚಿತ್ರಕಲೆಯು ಪ್ರಜಾಪ್ರಭುತ್ವದ ಗೌರವ ಇಮ್ಮಡಿಯಾಗಲು ಪ್ರೇರಣೆಯಾಗಲಿ: ಡಾ. ದುರಗೇಶ್

Date:

Advertisements

ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು ನೀಡುವಂತಾಗಲಿ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅಭಿಪ್ರಾಯಪಟ್ಟರು.

ಗದಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ‌ ಶಿಕ್ಷಣ ಸಂಸ್ಥೆಗಳ ಸಂಘದಿಂದ ನಗರದ ಡಾ. ಬಿ ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಷಯ ಕುರಿತು ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಚಿತ್ರಕಲಾ ಶಿಬಿರ ಏರ್ಪಡಿಸಲಾಗಿತ್ತು. ಈ ಚಿತ್ರಕಲಾ‌ ಶಿಬಿರದಲ್ಲಿ ಚಿತ್ರ ರಚನೆ ವೀಕ್ಷಿಸಿ ಶಿಕ್ಷಕರಿಗೆ ಶುಭ ಕೋರಿ ಅವರು ಮಾತನಾಡಿದರು.

ಚಿತ್ರಕಲಾ ಶಿಕ್ಷಕರು ತಮ್ಮದೇ ರೀತಿಯ ಶೈಲಿಯಲ್ಲಿ ಚಿತ್ರಗಳನ್ನು ಮನೋಜ್ಞವಾಗಿ ರಚಿಸುವ ಮೂಲಕ ಗಮನ ಸೆಳೆದರು. ನನ್ನ ಮತ ನನ್ನ ಹಕ್ಕು, ಭಾರತ ಸಂವಿಧಾನ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ನನ್ನ ಮತ ನನ್ನ ಭವಿಷ್ಯ ಹಾಗೂ ಅಂಬೇಡ್ಕರ್ ಸಂವಿಧಾನ ಕುರಿತ ವಿಷಯದ ಬಗ್ಗೆ ತಮ್ಮ ಕಲೆ ಮೂಲಕ ಬೆಳಕು ಚೆಲ್ಲಿದರು.

ಇದನ್ನೂ ಓದಿ: ಗದಗ | ಅರಣ್ಯ ಸಂರಕ್ಷಕರು ಹಸಿರಿನ ಹರಿಕಾರರು: ನ್ಯಾ.ಗಂಗಾಧರ ಎಂ ಸಿ

ಈ ವೇಳೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಜಿಲ್ಲೆಯ ಚಿತ್ರಕಲಾ ಶಿಕ್ಷಕರು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X