ನನ್ನ ಮತ, ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ನಗರದ ದೃಶ್ಯಕಲಾ ಕಾಲೇಜು ಬಳಿ ಸೈಕಲ್ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಸೈಕಲ್ ಜಾಗೃತಿ ಜಾಥಾಗೆ ದಾವಣಗೆರೆ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ (CEO) ಗಿತ್ತೆ ಮಾಧವ್ ವಿಠ್ಠಲ್ ರಾವ್ ಭಾಗಿಯಾಗಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು.

ದಾವಣಗೆರೆಯಲ್ಲಿ ಗ್ರಾಮೀಣಾಭಿವೃದ್ದಿ, ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ. ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸೈಕಲ್ ಜಾಗೃತಿ ರ‍್ಯಾಲಿ ವಿದ್ಯಾನಗರ ವೃತ್ತ, ತರಳಬಾಳು ಕಲ್ಯಾಣ ಮಂಟಪ ವೃತ್ತ, ಹದಡಿ ರಸ್ತೆ ವಿದ್ಯಾರ್ಥಿಭವನ ವೃತ್ತ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ ಗಾಂಧಿ ವೃತ್ತ, ಮಹಾನಗರ ಪಾಲಿಕೆ ಮುಂಭಾಗ, ಸಂಗೊಳ್ಳಿ ರಾಯಣ್ಣ ವೃತ್ತ, ನಿಜಲಿಂಗಪ್ಪ ಬಡಾವಣೆ ವೃತ್ತ, ಲಕ್ಷ್ಮೀ ಫ್ಲೋರ್ ಮಿಲ್ ವೃತ್ತ, ಗುಂಡಿ ವೃತ್ತ, ಬಾಪೂಜಿ ಆಸ್ಪತ್ರೆ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣವನ್ನು ತಲುಪಿತು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಡಿಹೆಚ್‌ಓ ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹರ್ಷ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.