ಧಾರವಾಡ | ಕೃಷಿ ಮೇಳದಲ್ಲಿ ಮಿನಿ‌ ಟ್ರ್ಯಾಕ್ಟರ್ ಬಿದ್ದು ಯುವಕ ಸಾವು: 5ಲಕ್ಷ ಪರಿಹಾರ ವಿತರಣೆ

Date:

Advertisements

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆಂದು ತಂದಿದ್ದ ಮಿನಿ ಟ್ರ್ಯಾಕ್ಟರ್‌ವೊಂದು ಕೆಳಗಿಳಿಸುವ ವೇಳೆ ಪಲ್ಟಿಯಾಗಿ, ತುಮಕೂರು ಮೂಲದ ಪರಶುರಾಮ ಆರ್. (32) ಎಂಬ ಯುವಕನ ಮೇಲೆ ಬಿದ್ದು ಸಾವನ್ನಪ್ಪಿದ್ದಾನೆ.

ಕ್ಯಾಂಟರ್ ವಾಹನದಿಂದ ಮಿನಿ ಟ್ರ್ಯಾಕ್ಟರ್‌ನ್ನು ಕೆಳಗಿಳಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ರಸ್ತೆಯ ಅವ್ಯವಸ್ಥೆಯೇ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಕೃಷಿ ಮೇಳದ ಟ್ರ್ಯಾಕ್ಟರ್ ಪ್ರದರ್ಶನ ಮಳಿಗೆಯ ಆವರಣದಲ್ಲಿ ರಸ್ತೆಯು ಸರಿಯಾಗಿಲ್ಲ. ಕೆಸರು ಗದ್ದೆಯಂತಾಗಿರುವ ಪರಿಸ್ಥಿತಿಯೇ ಈ ಘಟನೆಗೆ ಕಾರಣ ಎಂದು ಮೃತನ ಸಂಬಂಧಿಕರು ಹಾಗೂ ಸ್ಥಳೀಯ ಕೆಲವರು ಆರೋಪಿಸಿ, ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಲು ಬಿಡಲಿಲ್ಲ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿ.ಎಂ.ಸಿದ್ದರಾಮಯ್ಯ

ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಪ್ರತಿಭಟಿಸಿದ ನಂತರ, ಕೃಷಿ ವಿಶ್ವವಿದ್ಯಾಲಯವು, ಮೃತನ ಕುಟುಂಬಕ್ಕೆ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದೆ. ತದನಂತರ ಮೃತದೇಹವನ್ನು ತೆರವುಗೊಳಿಸಿದರು. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X