ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಲೂರು ಬಳಿಯ ತಾತ್ಕಾಲಿಕ ಸೇತುವೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಿಗ್ಗೆ 5 ಗಂಟೆಯಿಂದಲೇ ಸಂಚಾರ ಬಂದ್ ಆಗಿರುವುದರಿಂದ ಸೇತುವೆ ಎರಡೂ ಬದಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳ ಸರತಿ ಕಂಡುಬಂದಿದೆ.
ಸಿಂಧನೂರು ಮೂಲಕ ಕಲಬುರ್ಗಿ–ಬೀದರ್ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಬಂದ್ ಆಗಿರುವುದರಿಂದ ಸಾಮಾನ್ಯ ಜನತೆ ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದು ಸ್ಥಳೀಯರಲ್ಲಿ ಕಳವಳ ಹುಟ್ಟಿಸಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗರ್ಭಿಣಿ ಸಾವು
ಮಂದಗತಿಯ ಸೇತುವೆ ಕಾಮಗಾರಿಯೇ ಈ ದುರಂತಕ್ಕೆ ಕಾರಣವೆಂದು ಸಾರ್ವಜನಿಕರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

