ತುಮಕೂರು | ಪೋಲೇನಹಳ್ಳಿ ಪ್ರಕರಣ: ಸಂತ್ರಸ್ತ ದಲಿತ ಕುಟುಂಬಕ್ಕೆ ಸರ್ಕಾರ ನೆರವಾಗಲಿ; ಹೋರಾಟಗಾರರ ಒತ್ತಾಯ

Date:

Advertisements

ಪೋಲೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ಆನಂದನ ಕುಟುಂಬಕ್ಕೆ ತಕ್ಷಣ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂ ಹಣ ಪರಿಹಾರ ನೀಡಬೇಕು ಎಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಪೋಲೇನಹಳ್ಳಿಯಲ್ಲಿ ಕೊಲೆಯಾದ ದಲಿತ ವ್ಯಕ್ತಿ ಆನಂದನ ಕುಟುಂಬಸ್ಥರ ನಿವಾಸಕ್ಕೆ ರಾಜ್ಯ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ದಲಿತಪರ, ಪ್ರಗತಿಪರ ಹೋರಾಟಗಾರರು ಭೇಟಿ ನೀಡಿ ಸಾಂತ್ವಾನ ಹೇಳಿ ಘಟನೆಯ ನೈಜತೆಯ ಬಗ್ಗೆ ಕುಟುಂಬದವರಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಯಾಗಿರುವ ಆನಂದನ ಪತ್ನಿಗೆ ಸರ್ಕಾರ ಉದ್ಯೋಗ ನೀಡಬೇಕು ಮತ್ತು ಆನಂದನ ಮಗುವಿಗೆ ಉನ್ನತ ಶಿಕ್ಷಣದವರೆಗೂ ಸರ್ಕಾರವೇ ಉಚಿತ ಶಿಕ್ಷಣ ಕೊಡಿಸಬೇಕು ಎಂದು ಒತ್ತಾಯಿಸಿದರು.

1002057668

  ಆರೋಪಿ ನಾಗೇಶನ ತಂದೆ ತಾಯಿಯನ್ನು ಆಪಾದನೆ ಪಟ್ಟಿಯಲ್ಲಿ ಸೇರಿಸಿ ಬಂಧಿಸಬೇಕು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಶಾಸಕರಾದ ಕೆ ಎನ್ ರಾಜಣ್ಣ ಅವರು ಈ ಪ್ರಕರಣವನ್ನು ಗಂಭೀರವಾಗಿ ಗಂಭೀರವಾಗಿ ಪರಿಗಣಿಸಿ ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕ ಪ್ರೊ. ನರಸಿಂಹಪ್ಪ ಕಾಳೆನಳ್ಳಿ ಮಾತನಾಡಿ ಸೌಹಾರ್ದಯುತವಾಗಿ ಬಾಳಿ ಬದುಕಬೇಕಾದ ಎಸ್ಸಿ- ಎಸ್ಟಿ ಸಮುದಾಯಗಳು ಈ ರೀತಿ ಸಣ್ಣ ವಿಷಯಕ್ಕೆ ಜಗಳವಾಡಿ ಕೊಲೆಯಲ್ಲಿ ಅಂತ್ಯವಾಗಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ದಲಿತರಾಗಿದ್ದು ರಾಜಕೀಯ ಜನ್ಮ ನೀಡಿದ ಮಧುಗಿರಿ ತಾಲೂಕಿನಲ್ಲಿ ಆಗಿರುವ ಘಟನೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ ಶೋಷಿತರ ಪರ ನಿಲ್ಲಬೇಕಾಗಿದ್ದು ಇದುವರೆಗೂ ಸ್ಥಳಕ್ಕೆ ಭೇಟಿ ನೀಡದೆ ಇರುವುದು ದಲಿತರ ಮೇಲೆ ಇವರಿಗಿರುವ ಕಾಳಜಿ ಎಂತಹುದು ಎಂದು ಗೊತ್ತಾಗುತ್ತದೆ. ಅದೇ ರೀತಿ ಕೇಂದ್ರ ಸಚಿವ ವಿ ಸೋಮಣ್ಣ ಮತ್ತು ಶಾಸಕ ಕೆ ಎನ್ ರಾಜಣ್ಣ ಸ್ಥಳಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ನರವು ಮತ್ತು ಅಗತ್ಯತೆಗಳನ್ನು ಒದಗಿಸಲು ಮುಂದಾಗಬೇಕೆಂದು ತಿಳಿಸಿದರು.

1002057670

 ಕೈಗಾರಿಕೋದ್ಯಮಿ ಹಾಗೂ ದಲಿತ ಮುಖಂಡ ಡಿ.ಟಿ ವೆಂಕಟೇಶ್ ಮಾತನಾಡಿ ಕೊಲೆಯಾದ ಆನಂದ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಮತ್ತು ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು ಮತ್ತು ಕುಟುಂಬಕ್ಕೆ ಅಗತ್ಯ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು

1002057672

ಹಿರಿಯ ಹೋರಾಟಗಾರ ಪ್ರೊ. ದೊರೆರಾಜು ಮಾತನಾಡಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಗ್ರಾಮದಲ್ಲಿ ಜನತೆ ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ರೇಷ್ಮೆ ಇಲಾಖೆ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ನೀಹ, ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹರಾಜು,ಜಾಗೃತ ಕರ್ನಾಟಕ ರಾಜ್ಯಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಚಂದ್ರು ತರುಹುಣಸೆ, ತೊಂಡೋಟಿ ರಾಮಾಂಜಿನಪ್ಪ, ವಕೀಲ ನರಸಿಂಹಮೂರ್ತಿ, ಜೀವಿಕ ಮಂಜು, ಚಿಕ್ಕಮ್ಮ, ನಿವೃತ್ತ ಪ್ರಾಂಶುಪಾಲ ಮುನೀಂದ್ರ ಕುಮಾರ್ ಉಪನ್ಯಾಸಕ ರಾಮಚಂದ್ರಪ್ಪ, ನವೀನ್ ಪೂಜಾರಹಳ್ಳಿ, ನರಸಿಯಪ್ಪ, ನರಸಿಂಹಣ್ಣ,ವಿ.ಎಲ್ .ನರಸಿಂಹಮೂರ್ತಿ, ನಾಗಭೂಷಣ್ ಬಗ್ಗನಾಡು, ವಕೀಲ ಕಿಶೋರ್, ಅಶ್ವಿನಿ ಬೋದ್ , ಪೂರ್ಣ ರವಿಶಂಕರ್ ,ಶಶಾಂಕ್, ವೇಣುಗೋಪಾಲ ಮೌರ್ಯ, ಮಂಜು ಪಿಟಿಸಿಎಲ್, ಮಂಜನಾಥ್, ಮನೋಜ್ ,ಅಶ್ವಥ್ ನಾರಾಯಣ ಗುಟ್ಟೆ, ಹಾಗೂ ಎಸ್.ಸಿ, ಎಸ್.ಟಿ ಸಮುದಾಯದ ಹೋರಾಟಗಾರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X