ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಅವರಿಗೆ ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆ ಸಂಬಂಧ ಜಾರಿ ನಿರ್ದೇಶನಾಲಯ ಮಂಗಳವಾರ (ಸೆ.16) ಸಮನ್ಸ್ ಜಾರಿ ಮಾಡಿದೆ ಎಂದು ವರದಿ ಮಾಡಿದೆ.
39 ವರ್ಷದ ಉತ್ತಪ್ಪ ಅವರನ್ನು ಸೆಪ್ಟೆಂಬರ್ 22 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಲು ಇಡಿ ಮುಂದೆ ಹಾಜರಾಗಲು ಕೇಳಲಾಗಿದೆ.
ಮತ್ತೊಂದೆಡೆ, ಯುವರಾಜ್ ಸಿಂಗ್ ಅವರನ್ನು ಒಂದು ದಿನದ ನಂತರ ಸೆಪ್ಟೆಂಬರ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
2022ರಲ್ಲಿ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತರಾದ ಉತ್ತಪ್ಪ, ಈ ಹಿಂದೆ ಬೆಟ್ಟಿಂಗ್ ಪ್ರಚಾರದ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದರು.