ಕುಡಿದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಲಾರಿ ನುಗ್ಗಿಸಿದ ಚಾಲಕ; ಮೂವರು ಸಾವು, ಹಲವರಿಗೆ ತೀವ್ರ ಗಾಯ

Date:

Advertisements

ಕುಡಿದ ಅಮಲಿನಲ್ಲಿ ಲಾರಿ ಚಾಲಕನೊಬ್ಬ ಪಾದಚಾರಿಗಳು ಮತ್ತು ವಾಹನಗಳ ಮೇಲೆ ಟ್ರಕ್ ನುಗ್ಗಿಸಿದ್ದು, ದುರಂತದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರಿಗೆ ತೀವ್ರ ಗಾಯಗಳಾಗಿವೆ.

ಮಧ್ಯ ಪ್ರದೇಶದ ಇಂದೋರ್‌ನ ಕಲಾನಿ ನಗರದಲ್ಲಿಸೋಮವಾರ ಸಂಜೆ ಈ ಭಯಾನಕ ಘಟನೆ ನಡೆದಿದ್ದು, ರಸ್ತೆ ತುಂಬೆಲ್ಲ ದೇಹಗಳು ಬಿದ್ದಿವೆ. ನೋವಿನಿಂದ ನರಳಾಡುತ್ತಿರುವವ ದೃಶ್ಯ ಹೃದಯವಿದ್ರಾವಕವಾಗಿತ್ತು.

“ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಕುಡಿದ ಮತ್ತಿನಲ್ಲಿದ್ದ ಟ್ರಕ್ ಚಾಲಕ ಮೊದಲಿಗೆ ರಾಮಚಂದ್ರ ನಗರ ಸಮೀಪ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಬಡಾ ಗಣಪತಿ ಪ್ರದೇಶದ ಕಡೆಗೆ ಟ್ರಕ್ ಅನ್ನು ನುಗ್ಗಿಸಿದ್ದಾನೆ” ಎಂದು ಉಪ ಪೊಲೀಸ್‌ ಆಯುಕ್ತ ಕೃಷ್ಣ ಲಾಲ್‌ ಚಂದಾನಿ” ಘಟನೆಯ ಬಗ್ಗೆ ವಿವರಿಸಿದ್ದಾರೆ.

ಅಪಘಾತದ ಬೆನ್ನಲ್ಲೇ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೋಪಗೊಂಡ ಸ್ಥಳೀಯರು ಟ್ರಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಈ ವರದಿಗಳನ್ನು ನಿರಾಕರಿಸಿರುವ ಸ್ಥಳೀಯರು, ಟ್ರಕ್ ಕೆಳಗೆ ಸಿಲುಕಿಗೊಂಡಿದ್ದ ಬೈಕ್‌ನ ಟ್ಯಾಂಕ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದಿದ್ದಾರೆ. ಏತನ್ಮಧ್ಯೆ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X