ಕೂಡ್ಲಿಗಿ | ವಿದ್ಯುತ್ ತಂತಿ ತಗುಲಿ ಯುವಕ ಸಾವು

Date:

Advertisements

ವಿದ್ಯುತ್‌ ಪ್ರವಹಿಸುತ್ತಿರುವ ತಂತಿ ಹರಿದು ಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ನಿನ್ನೆ (ಸೆ.15) ರಾತ್ರಿ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಡೆದಿದೆ. ಪಟ್ಟಣದ ರಾಜೀವಗಾಂಧೀನಗರ ವಾಸಿ ಯುವಕ ಸಾಗರ್ ಮೃತ ಯುವಕ.

ಪಟ್ಟಣದ ಹಳೇ ಆಸ್ಪತ್ರೆಯ ಬಳಿಯ ತನ್ನ ತಂದೆಯ ತರಕಾರಿ ಅಂಗಡಿಯಲ್ಲಿ ಕುಳಿತಿದ್ದ ಸಂದರ್ಭದಲ್ಲಿ, ಅಂಗಡಿಗೆ ಹತ್ತಿರದಲ್ಲಿಯೇ ಇದ್ದ ವಿದ್ಯುತ್ ಪರಿವರ್ತಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಗಾಳಿಯ ರಭಸಕ್ಕೆ ವಿದ್ಯುತ್ ಪ್ರವಹಿಸುತ್ತಿರುವ ತಂತಿ ಅಂಗಡಿಯ ಮೇಲೆ ಬಿದ್ದಿದೆ. ಯುವಕ ಅಂಗಡಿಯಿಂದ ಹೊರಬರುವ ಪ್ರತ್ನದಲ್ಲಿದ್ದಾಗಲೇ ವಿದ್ಯುತ್‌ ತಾಗಿ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದರು. ಸಾರ್ವಜನಿಕರು ಸಾಗರನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಸಾಗರ ಮೃತಪಟ್ಟಿದ್ದು, ಏಕೈಕ ಪುತ್ರನ ಅಗಲಿಕೆಯ ಸುದ್ದಿ ತಿಳಿದ ಕುಟುಂಬ ಸದಸ್ಯರ ಅಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿದ ಕೂಡಲೇ ಪೊಲೀಸ್ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಯವರು, ಜೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಮತ್ತು ಅಗ್ನಿ ಶಾಮಕ ದಳದ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಿದ್ದಾರೆ.

ಇದನ್ನೂ ಓದಿ: ಕೂಡ್ಲಿಗಿ | ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ಆವರಣದಲ್ಲಿ ವಿಜ್ಞಾನ ಪಿಯು ಕಾಲೇಜು ಆರಂಭ

ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕರವರು ಹಾಗೂ ಕೆಲ ಪಪಂ ಸದಸ್ಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇಲಾಖಾಧಿಕಾರಿಗಳೊಂದಿಗೆ ಸಮಾಲೋಚಿಸಿ, ದುರ್ಘಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಅವಘಡದಿಂದಾಗಿ ಮೃತ ಪಟ್ಟ ಯುವಕ ಸಾಗರನ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ. ಕೂಡ್ಲಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X