ಸಂಕಷ್ಟ ಬಂದಾಗ ಕುರುಬ ಸಮುದಾಯ ಸಿದ್ದರಾಮಯ್ಯಗೆ ನೆನಪಾಗಿದೆ: ಎಚ್‌ ವಿಶ್ವನಾಥ್

Date:

Advertisements

ಕುರುಬ ಸಮುದಾಯಕ್ಕೆ ಈವರೆಗೂ ಯಾವುದೇ ಕೊಡುಗೆ ನೀಡದ ಸಿದ್ದರಾಮಯ್ಯ ಈಗ ಎಸ್‌ಟಿ ಸಮುದಾಯಕ್ಕೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಇದು ಕೇವಲ ನಾಟಕ, ಸಿಎಂ ಸ್ಥಾನಕ್ಕೆ ಸಂಕಷ್ಟ ಬಂದಿದೆ. ಈಗ ಕುರುಬರು ನೆನಪಾಗಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಟೀಕಿಸಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗಲೆಲ್ಲಾ ಕುರುಬರ ನೆನಪಾಗುತ್ತದೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ಎಂದೋ ಈ ಕೆಲಸ ಮಾಡಬಹುದಿತ್ತು. ಆದರೆ ಅದನ್ನು ಮಾಡಿಲ್ಲ” ಎಂದು ಹರಿಹಾಯ್ದರು.

“ಕುರುಬ ಸಮುದಾಯದ ನಾಯಕರನ್ನು ವ್ಯವಸ್ಥಿತವಾಗಿ ತುಳಿದಿದ್ದಾರೆ. ನನ್ನನ್ನು ಸಹ ಸಿದ್ದರಾಮಯ್ಯ ತುಳಿದಿದ್ದಾರೆ. ಕುರುಬ ನಾಯಕರು ಬೆಳೆಯಲು ಅವರು ಬಿಟ್ಟಿಲ್ಲ. ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುವ ಸಿದ್ದರಾಮಯ್ಯ ಸಮುದಾಯದ ಪರವಾಗಿ ಏನು ಹೋರಾಟ ಮಾಡಿದ್ದಾರೆ? ಬರೀ ಬೊಗಳೆ ಬಿಟ್ಟುಕೊಂಡು ಓಡಾಡ್ತಿದ್ದಾರೆ. ಇದೇ ಅವರ ಸಾಧನೆ” ಎಂದು ವಾಗ್ದಾಳಿ ನಡೆಸಿದರು.

“ಕುರುಬ ಸಮುದಾಯವನ್ನು ಎಸ್‌ಟಿ ಟ್ಯಾಗ್ ಮಾಡಬೇಕು ಎಂದು ಸಿದ್ದರಾಮಯ್ಯ ಎಂದೂ ಸಚಿವ ಸಂಪುಟದಿಂದ ಪಾಸ್ ಮಾಡಿಲ್ಲ. ಯಾವತ್ತಿಗೂ ವಿರೋಧಿಸಿದವರು. ಆದರೆ ಬಿಜೆಪಿಯವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ನಾವೆಲ್ಲ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳಿಸಿದ್ದೆವು. ಕುಲಶಾಸ್ತ್ರೀಯ ಅಧ್ಯಯನವನ್ನು ಮಾಡಲಾಗಿತ್ತು. ನಂತರ ಬಂದ ಸಿದ್ದರಾಮಯ್ಯ ಸರ್ಕಾರ ಅದನ್ನು ಸುಮ್ಮನೆ ಕೇಂದ್ರ ಸರ್ಕಾರಕ್ಕೆ ಕಳುಹಿಸಿದರು. ಕಾನೂನು ಪ್ರಕಾರ ಅದು ಆಗಲಿಲ್ಲ” ಎಂದರು.

“ಕುರುಬ ಸಮುದಾಯದ ನಾಯಕತ್ವವವನ್ನು ತುಳಿದರು. ಪರಿಶಿಷ್ಠ ಪಂಗಡಕ್ಕೆ ಸೇರಬೇಕೆಂದು ಹೋರಾಟ ಮಾಡಿಕೊಂಡು ಬಂದೆವು. ಆದರೆ ಯಾವತ್ತಾರೂ ಸಿದ್ದರಾಮಯ್ಯ ಸಹಾಯ ಮಾಡಿದ್ದಾರಾ? ನಾಲ್ಕು ಜನರನ್ನು ಎಂಎಲ್ ಸಿ ಮಾಡಿದ್ದೀರಲ್ಲ ಅದರಲ್ಲಿ ಯಾರಾದರೂ ಹಿಂದುಳಿದ ವರ್ಗದವರು ಇದ್ದಾರಾ? ಎಚ್ ಎಂ ರೇವಣ್ಣ ಅವರನ್ನು ಮಾಡಬಹುದಿತ್ತಲ್ವಾ” ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಜಾತಿ ಗಣತಿಗೆ ಆದೇಶಿಸಿರುವ ಬಗ್ಗೆ ಮಾತನಾಡಿ, “ಕಾಂತರಾಜು ಆಯೋಗ ನೀಡಿರುವ ಜಾತಿಗಣತಿ ವರದಿ ನೀಟಾಗಿದೆ. ಆದರೆ, ಅದನ್ನು ಜಾರಿಗೊಳಿಸಲು ಧೈರ್ಯವನ್ನೇ ತೋರಲಿಲ್ಲ. ಕಾಂತರಾಜು ಆಯೋಗ ನೀಡಿದ ಜಾತಿ ಗಣತಿ ವರದಿಯನ್ನು 10 ವರ್ಷ ಕಾಲ ತಲೆಕೆಳಗೆ ಇಟ್ಟುಕೊಂಡು ಮಲಗಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X