ಉಡುಪಿ | ಹಿರಿಯ ನಾಗರಿಕರರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

Advertisements

ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರೀಯವಾಗಿ ಭಾಗವಹಿಸುವುದರಿಂದ ನೆರೆಹೊರೆಯವರೊಂದಿಗೆ ಉತ್ತಮ ಭಾಂದವ್ಯ ಹೊಂದುವುದರೊAದಿಗೆ ಜೀವನೋತ್ಸಾಹ ಹೆಚ್ಚುವಂತೆ ಮಾಡುತ್ತದೆ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಿರಿಯ ನಾಗರಿಕರ ವೇದಿಕೆ/ ಸಂಸ್ಥೆಗಳು, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ), ವೃದ್ಧಾಶ್ರಮಗಳು ಹಾಗೂ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳಿಗೆ ಬಕೆಟ್‌ಗೆ ಬಾಲ್ ಎಸೆಯುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡುತ್ತಿದ್ದರು.

ಹಿರಿಯ ನಾಗರಿಕರ ಕ್ರೀಡಾಕೂಟ 1

ಜಿಲ್ಲೆಯ ಹಿರಿಯ ನಾಗರಿಕರು ಹೆಚ್ಚು ಕ್ರೀಯಾಶೀಲರಾಗಿ, ಯುವಜನತೆಗೆ ಮಾದರಿಯಾಗುವ ನಿಟ್ಟಿನಲ್ಲಿ ಜೀವನ ನಡೆಸುತ್ತಿದ್ದಾರೆ. ಹಿರಿಯ ನಾಗರಿಕರು ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ಲವಲವಿಕೆಯಿಂದ ಕೂಡಿರಲು ಸಾಧ್ಯ ಎಂದ ಅವರು, ಹಿರಿಯ ನಾಗರಿಕರ ರಕ್ಷಣೆಗಾಗಿ ಸರಕಾರ ಹಲವಾರು ಕಾಯಿದೆ ಹಾಗೂ ಕಾನೂನುಗಳನ್ನು ಜಾರಿಗೆ ತಂದಿದೆ. ಹಿರಿಯ ನಾಗರಿಕರು ಇವುಗಳ ಮಾಹಿತಿ ಹೊಂದುವುದರೊಂದಿಗೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವ ಮನೋಭಾವ ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಸಬೇಕು. ಆಗ ಹಿರಿಯರ ರಕ್ಷಣೆ ಮಕ್ಕಳಿಂದಲೇ ಆಗುತ್ತದೆ ಎಂದ ಅವರು, ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವ ಕರ್ತವ್ಯ ಪೋಷಕರ ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಡಿಡಿರ‍್ಸಿ ಸದಸ್ಯ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಹೆಚ್. ವಿಶ್ವನಾಥ್ ಹೆಗ್ಡೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ನಿರಂಜನ ಭಟ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಾಸಂತಿ ಕೊರಡ್ಕಲ್, ತಾಲೂಕು ಹಿರಿಯ ನಾಗರಿಕರ ವೇದಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ
ನಾಗರಿಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರುಗಳಿಗೆ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆದವು. ಜಿಲ್ಲಾ ವಿಶೇಷ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್ ರವೀಂದ್ರ ಸ್ವಾಗತಿಸಿ, ನಿರೂಪಿಸಿ, ಜಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X