ಎಂಎಸ್‌ಪಿಯಡಿ ತಕ್ಷಣ ಹೆಸರು, ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್ ಚಲುವರಾಯಸ್ವಾಮಿ ಮನವಿ

Date:

Advertisements

ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು.

ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು.

ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇವೆ. ರೈತರ ಪರವಾಗಿ SMAM, RKVY, ATMA, PMSKY, WDC ಮತ್ತು PDPS ನಂತಹ ಯೋಜನೆಗಳನ್ನು ಮಂಜೂರು ಮಾಡಿದ್ದಕ್ಕಾಗಿ, ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮಾವು ಬೆಳೆಗಾರರಿಗೆ ಸಹಾಯ ಮಾಡಿದ್ದಕ್ಕಾಗಿ ನಾವು ಆಭಾರಿಯಾಗಿದ್ದೇವೆ ಎಂದು ಅವರು ಹೇಳಿದರು.

ಇದೇ ರೀತಿ ಬೆಲೆ ಕುಸಿತ ಎದುರಿಸುತ್ತಿರುವ ರೈತರ ತುರ್ತು ಅಗತ್ಯಗಳನ್ನು ಪೂರೈಸಿ ಸಂಕಷ್ಟದಿಂದ ಪಾರುಮಾಡುವಂತೆ ಸಚಿವರು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ಕರ್ನಾಟಕದಲ್ಲಿ ರೈತರು ಯಾಂತ್ರೀಕೃತ ಕೃಷಿ ಪದ್ಧತಿಗಳನ್ನು ಹೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ SMAM ಯೋಜನೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ 2025-26ನೇ ಸಾಲಿಗೆ ರಾಜ್ಯಕ್ಕೆ ಹೆಚ್ಚುವರಿಯಾಗಿ ರೂ 200 ಕೋಟಿ ಅನುದಾನವನ್ನು ಒದಗಿಸಬೇಕೆಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

ರಸಗೊಬ್ಬರ ಪೂರೈಕೆ: ಏಪ್ರಿಲ್‌ನಿಂದ ಸೆಪ್ಟೆಂಬರ್ 2025ರ ಅವಧಿಗೆ ನಮಗೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಇನ್ನೂ ಬಾಕಿ ಇದೆ. ದಯವಿಟ್ಟು ಆದಷ್ಟು ಬೇಗ ಪೂರೈಸಲು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು‌.

ಕೃಷಿ ವಿಶ್ವವಿದ್ಯಾಲಯಕ್ಕೆ ಮಾನ್ಯತೆ: ಮಂಡ್ಯದಲ್ಲಿ ಹೊಸದಾಗಿ ಪ್ರಾರಂಭವಾದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ICAR ನಿಂದ ಔಪಚಾರಿಕ ಮಾನ್ಯತೆ ಮತ್ತು ಅಗತ್ಯ ಅನುದಾನ ನೀಡಬೇಕು. ಜೊತೆಗೆ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು (KVK) ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ (AICRP) ಕೇಂದ್ರಗಳನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಬೇಕೆಂದು ಅವರು ಕೋರಿದರು.

RKVY ಯೋಜನೆಗಳು: ರೈತರ ಕಲ್ಯಾಣಕ್ಕಾಗಿ RKVY ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿ, ಅಗತ್ಯವಿರುವ ಹೆಚ್ಚುವರಿ ನಿಧಿಯನ್ನು ಮಂಜೂರು ಮಾಡುವಂತೆ ಚಲುವರಾಯಸ್ವಾಮಿ ಮನವಿ‌ ಮಾಡಿದರು.

ನಮ್ಮ ರಾಜ್ಯದ ರೈತರ ಹಿತ ಕಾಪಾಡುವ ಈ ನಿಟ್ಟಿನಲ್ಲಿ ಕೇಂದ್ರದ ಬೆಂಬಲ ಮತ್ತು ಸಕಾರಾತ್ಮಕ ಪ್ರತಿಕ್ರಿಯೆ ಎದುರು ನೋಡುತ್ತಿದ್ದೇವೆ. ಇದರಿಂದ ರೈತರ ಬದುಕು ಇನ್ನಷ್ಟು ಉತ್ತಮವಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸಚಿವರಾದ ಭಗೀರಥ ಚೌಧರಿ ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಹಾಗೂ ಅಧಿಕಾರಿಗಳು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X