ಬಾಗಲಕೋಟೆ | ಅನಧಿಕೃತ ಶಿವಾಜಿ ಪ್ರತಿಮೆ ತೆರವು; ನಗರದಲ್ಲಿ ನಿಷೇಧಾಜ್ಞೆ

Date:

Advertisements

ಬಾಗಲಕೋಟೆಯಲ್ಲಿ ಅನುಮತಿ ಪಡೆಯದೇ ಸ್ಥಾಪಿಸಲಾಗಿದ್ದ ಶಿವಾಜಿ ಪ್ರತಿಮೆಯನ್ನು ಜಿಲ್ಲಾಡಳಿತ ತೆರುವುಗೊಳಿಸಿದೆ. ತೆರವನ್ನು ಖಂಡಿಸಿ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗದ್ದಲ, ಗಲಾಟೆ ಮಾಡದಂತೆ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಎರಡು ದಿನಗಳ ಕಾಲ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಗರದ ಲಯನ್ಸ್‌ ವೃತ್ತದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಅದನ್ನು ಬುಧವಾರ ರಾತ್ರಿ ತೆರವುಗೊಳಿಸಲಾಗಿದೆ. ಈ ವೇಳೆ, ಬಿಜೆಪಿ ಮುಖಂಡ ನಾರಾಯಣ ಭಾಂಡೆಗೆ, ರಾಜು ನಾಯ್ಕರ, ಬಸವರಾ ಯಂಕಂಚಿ ಹಾಗೂ ಸಂಘಪರಿವಾರ ಹಲವಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅವರಲ್ಲಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಪ್ರತಿಮೆ ತೆರವುಗೊಳಿಸಿದ ಬಳಿಕ ನಗರದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಮೆ ಇದ್ದ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ ಅವರು ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

“ʼಶಿವಾಜಿ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಲಾಗಿದೆ. ಆದ್ದರಿಂದ ಅದನ್ನು ತೆರವುಗೊಳಿಸಲಾಗಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆಗಸ್ಟ್‌ 18ರವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆʼʼ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X