ಯೋಜನೆ & ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಕಾರ್ಯ

Date:

Advertisements

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸರ್ಕಾರ ರಚಿಸಿದ್ದು, ಸದರಿ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಲಿದೆ.

ಸೆ.16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಲು ತೀರ್ಮಾನಿಸಲಾಯಿತು.

ಇದಕ್ಕೂ ಮೊದಲು 2024 ಸೆಪ್ಟೆಂಬರ್‌ 17ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಸಚಿವ ಸಂಪುಟವು ನಿರ್ಧರಿಸಲಾಗಿತ್ತು.

ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿರುತ್ತಾರೆ. ಎಲ್ಲ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X