ಉಡುಪಿ | ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ, ಜಿಲ್ಲಾ ಬಿಜೆಪಿಗರ ಬೌದ್ಧಿಕ ದಿವಾಳಿತನದ ಅನಾವರಣ

Date:

Advertisements

ಉಡುಪಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಪೋಟೊ ಹಂಚಿಕೊಳ್ಳುವ ಅಭಿಯಾನ ಮಾಡುವ ಮೊದಲು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯಿಂದ ನಿರಂತರ ಅಮೂಲ್ಯ ಜೀವಹಾನಿಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ರೊಚ್ಚಿಗೆದ್ದಿರುವುದನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಯ ಬಗ್ಗೆ ಕೇಂದ್ರ ಸರ್ಕಾರದಿಂದ ಅನುದಾನ ತರುವ ಬಗ್ಗೆ ಪ್ರಯತ್ನಿಸಬೇಕಿತ್ತು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಜಿಲ್ಲಾ ಬಿಜೆಪಿಯವರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಸಾವಿನ ಕೂಪಗಳ ಜೊತೆ ಸೆಲ್ಫಿ ಪೋಟೊ ತೆಗೆದು ಅದನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವರಿಗೆ ಕಳುಹಿಸಿದ್ದರೆ ಈ ಅಭಿಯಾನ ಸಾರ್ಥಕತೆಯನ್ನು ಕಂಡುಕೊಳ್ಳುತ್ತಿತ್ತು ಎಂದರು.

ಉಡುಪಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯವರು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರು ಬಿಜೆಪಿ ಅವರು ನಗರಸಭೆ ಆಡಳಿತವಿರುವುದು ಬಿಜೆಪಿಯವರದ್ದು. ಪರ್ಕಳದ ರಾಷ್ಟ್ರೀಯ ಹೆದ್ದಾರಿ, ಮಲ್ಪೆಯಿಂದ ಕರಾವಳಿ ತನಕ ರಾಷ್ಟ್ರೀಯ ಹೆದ್ದಾರಿ, ಸಂತಕಟ್ಟೆ ರಾಷ್ಟ್ರೀಯ ಹೆದ್ದಾರಿ, ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಬಗ್ಗೆ ಯಾವಾಗ ತಮ್ಮ ಬಾಯಿ ತೆರೆಯುತ್ತಿರಿ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಇಂತಹ ಹೀನಾಯ ಕೃತ್ಯಗಳಿಗೆ ಮುಂದಾಗಬೇಡಿ ಜನರು ತಮ್ಮ ವೈಫಲ್ಯಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಇಂದ್ರಾಳಿ ರೈಲ್ವೆ ಬ್ರಿಜ್ ಸಂಪೂರ್ಣ ಗೊಳಿಸಲು ತಮಗೆ ಹತ್ತು ವರ್ಷಗಳ ಕಾಲ ಬೇಕಾಯಿತು.

ಜಿಲ್ಲಾ ಬಿಜೆಪಿ ಈ ನೂತನ ಅಭಿಯಾನ ಪ್ರಾರಂಭಿಸುವ ಮೊದಲು ಇಲ್ಲಸಲ್ಲದ ವಿಚಾರಗಳಿಂದಲೇ ಕಾಲಹರಣ ಮಾಡುತ್ತಿರುವ ಜಿಲ್ಲೆಯ ಸಂಸದರ,ಐದು ಶಾಸಕರನ್ನು ರಸ್ತೆ ಗುಂಡಿಗಳ ಬಳಿಗೆ ಕರೆದುಕೊಂಡು ಹೋಗಿ ಅಲ್ಲಿ ಸೆಲ್ಫಿ ಪೋಟೊ ತೆಗೆದು ಅವರು ತಮ್ಮ ಕರ್ತವ್ಯವನ್ನು ನೆನಪಿಸಿಕೊಳ್ಳುವಂತೆ ಮಾಡಬೇಕಿತ್ತು. ಹಾಗೆಯೇ ರಾಜ್ಯದ ಕೋಟ್ಯಾಂತರ ಮಂದಿಗೆ ಆರ್ಥಿಕ ಚೈತನ್ಯ ಕಲ್ಪಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸುವಂತೆ ರಮೇಶ್ ಕಾಂಚನ್ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X